ಕರೆಂಟ್ ಶಾಕ್, ಅಡಕೆ ತೋಟಕ್ಕೆ ಅಲುಮಿನಿಯಮ್ ಏಣಿ ಕೊಂಡೊಯ್ಯುತ್ತಿದ್ದ ರೈತ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | ತೀರ್ಥಹಳ್ಳಿ | 16 ಜುಲೈ 2019

ಅಡಕೆ ತೋಟದಲ್ಲಿ ಕೃಷಿ ಕೆಲಸಕ್ಕೆ ಅಲುಮಿನಿಯಮ್ ಏಣಿ ತರುವಾಗ ವಿದ್ಯುತ್ ತಂತಿಗೆ ತಗುಲಿ, ರೈತರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಾಲೂಕಿನ ಬಸವಾನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋರಳಿಯಲ್ಲಿ ನಡೆದಿದೆ.

ನಾಗಪ್ಪಗೌಡ (64) ಮೃತ ರೈತ. ತೋಟದಲ್ಲಿ ಕೆಲಸಕ್ಕಾಗಿ ಅಲುಮಿನಿಯಮ್ ಏಣಿ ತರುವಾಗ ಘಟನೆ ನಡೆದಿದೆ. ಮೆಸ್ಕಾಂ ಇಲಾಖೆ ಅಧಿಕಾರಿಗಳು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment