ಬೆಳಗ್ಗೆ ಎದ್ದು ಬಂದಾಗ ಓಪನ್‌ ಆಗಿತ್ತು ಮನೆ ಬಾಗಿಲು, ರೂಂಗೆ ಹೋದಾಗ ಕುಟುಂಬದವರಿಗೆ ಆಘಾತ, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA, 22 AUGUST 2024 | ಕುಟುಂಬದವರೆಲ್ಲ ಹಿಂಬದಿ ಶೆಡ್‌ನಲ್ಲಿ ಮಲಗಿದ್ದಾಗ ಮನೆಯ ಬಾಗಿಲು ಮೀಟಿ ಚಿನ್ನಾಭರಣ ಕಳ್ಳತನ (Theft) ಮಾಡಲಾಗಿದೆ. ಶಿವಮೊಗ್ಗ ತಾಲೂಕು ಹಾಯ್‌ಹೊಳೆ ಸಮೀಪದ ಭಾರತಿ ನಗರದಲ್ಲಿ ಘಟನೆ ಸಂಭವಿಸಿದೆ.

ಮೀನಾಕ್ಷಿ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಮೀನಾಕ್ಷಿ ಅವರ ಪುತ್ರಿ ಈಚೆಗೆ ತೀರಿಕೊಂಡಿದ್ದರು. ಈ ಹಿನ್ನೆಲೆ ಪೂಜೆ ಮಾಡಿಸಲಾಗಿತ್ತು. ಅದೇ ಕಾರಣಕ್ಕೆ ಮನೆಯವರೆಲ್ಲ ಹಿಂಬದಿಯಲ್ಲಿರುವ ಶೆಡ್‌ನಲ್ಲಿ ಮಲಗುತ್ತಿದ್ದರು. ಆ.17ರಂದು ರಾತ್ರಿ ಊಟ ಮುಗಿಸಿ ಶೆಡ್‌ನಲ್ಲಿ ಎಲ್ಲರು ಮಲಗಿದ್ದರು. ಬೆಳಗ್ಗೆ ಮನೆಗೆ ಬಂದಾಗ ಬಾಗಿಲು ಮೀಟಿ ತೆಗೆಯಲಾಗಿತ್ತು ಎಂದು ಆರೋಪಿಸಲಾಗಿದೆ.

Crime-News-General-Image

ಮನೆಯ ರೂಂನ ಬೀರುವಿನಲ್ಲಿ ಇಟ್ಟಿದ್ದ ಚಿನ್ನಾಭರಣ ಕಳ್ಳತನ ಮಾಡಲಾಗಿದೆ. 2.40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳುವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ ⇒ ಪಡಿತರ ಚೀಟಿದಾರರೆ ಗಮನಿಸಿ, ಆ.31 ಕೊನೆ ದಿನ, ತಪ್ಪಿದರೆ ಪಡಿತರ ಸಿಗಲ್ಲ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 22, 2024

Leave a Comment