SHIKARIPURA, 25 AUGUST 2024 : ಸ್ನೇಹಿತರೊಂದಿಗೆ ಪ್ರವಾಸಕ್ಕೆ (Tourist) ಬಂದಿದ್ದ ಯುವಕನೊಬ್ಬ ಕಾಲು ಜಾರಿ ಕಲ್ಯಾಣಿಗೆ ಬಿದ್ದು ಸಾವನ್ನಪ್ಪಿದ್ದಾನೆ. ಶಿಕಾರಿಪುರ ತಾಲೂಕು ಉಡುತಡಿ ಗ್ರಾಮದ ಅಕ್ಕಮಹಾದೇವಿ ಜನ್ಮಸ್ಥಳದ ಪ್ರವಾಸಿ ತಾಣದಲ್ಲಿ ಘಟನೆ ಸಂಭವಿಸಿದೆ.
ಶಿರಾಳಕೊಪ್ಪದ ಗಂಡಗಡಕೇರಿ ನಿವಾಸಿ ತಾಹೀರ್ (21) ಮೃತ ದುರ್ದೈವಿ. ತಾಹೀರ್ ಇವತ್ತು ಸ್ನೇಹಿತರೊಂದಿಗೆ ಅಕ್ಕಮಹಾದೇವಿ ಜನ್ಮಸ್ಥಳಕ್ಕೆ ಆಗಮಿಸಿದ್ದ. ಫೋಟೊ ತೆಗೆಯುವ ವೇಳೆ ಕಾಲು ಜಾರಿ ಕಲ್ಯಾಣಿಗೆ ಬಿದ್ದಿದ್ದಾನೆ ಎನ್ನಲಾಗಿದೆ. ಕೂಡಲೆ ಆತನ ರಕ್ಷಣಾ ಕಾರ್ಯ ನಡೆಸಲಾಯಿತು. ಅಷ್ಟರಲ್ಲಿ ತಾಹೀರ್ ಕೊನೆಯುಸಿರೆಳೆದಿದ್ದಾನೆ ಎನ್ನಲಾಗಿದೆ. ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಮಳೆಗೆ ಮನೆ ಗೋಡೆ ಕುಸಿತ, ಅದೃಷ್ಟವಶಾತ್ ತಪ್ಪಿದ ಅನಾಹುತ

About The Editor
ನಿತಿನ್ ಆರ್.ಕೈದೊಟ್ಲು






