ಪಡಿತರ ಚೀಟಿ, ಈ 4 ಮಾನದಂಡದ ಬಗ್ಗೆ ಗೊತ್ತಿದೆಯಾ? ತಕ್ಷಣ ಪರಿಶೀಲಿಸದೆ ಇದ್ದರೆ ದಂಡ ನಿಶ್ಚಿತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA, 25 AUGUST 2024 : ರಾಜ್ಯಾದ್ಯಂತ ಅನರ್ಹ ಪಡಿತರ ಚೀಟಿ (Ration Card) ರದ್ದುಗೊಳಿಸುವ ಅಭಿಯಾನವನ್ನು ರಾಜ್ಯ ಸರ್ಕಾರ ಮುಂದುವರೆಸಿದೆ. ಈ ಮಧ್ಯೆ ಆರು ತಿಂಗಳಿಂದ ಪಡಿತರ ಪಡೆಯದವರ ಕಾರ್ಡುಗಳನ್ನು ರದ್ದುಗೊಳಿಸಲಾಗುತ್ತಿದೆ. ಇನ್ನೊಂದೆಡೆ ಅನರ್ಹರು ಕಾರ್ಡ್‌ ಕ್ಯಾನ್ಸಲ್‌ ಮಾಡಿಸುವಂತೆ ಗಡುವು ನೀಡಿದೆ.

ಶಿವಮೊಗ್ಗ ಜಿಲ್ಲೆಯಲ್ಲಿಯು ಅನರ್ಹ ಪಡಿತರ ಚೀಟಿ ರದ್ದುಗೊಳಿಸುವ ಕಾರ್ಯ ನಡೆಯುತ್ತಿದೆ. ಆಹಾರ ಇಲಾಖೆ ಅಂಕಿ ಅಂಶದ ಪ್ರಕಾರ, ಈ ವರ್ಷ ಜುಲೈನಲ್ಲಿ ಅತ್ಯಧಿಕ ರೇಷನ್‌ ಕಾಡ್‌ ರದ್ದಾಗಿದೆ.

ಎಷ್ಟು ರೇಷನ್‌ ಕಾರ್ಡ್ ಇದೆ?

ಆಹಾರ ಇಲಾಖೆ ಅಂಕಿ ಅಂಶದ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 4.92 ಲಕ್ಷ ಪಡಿತರ ಚೀಟಿಗಳಿವೆ. ಈ ಪೈಕಿ 1,80,934 ಪಡಿತರ ಚೀಟಿಗಳು ನಗರ ಪ್ರದೇಶದಲ್ಲಿವೆ. ಗ್ರಾಮೀಣ ಭಾಗದಲ್ಲಿ 3,11,501 ಪಡಿತರ ಚೀಟಿಗಳಿವೆ. 16.78 ಲಕ್ಷ ಜನರು ಈ ಕಾರ್ಡುಗಳ ವ್ಯಾಪ್ತಿಗೆ ಒಳಪಡಲಿದ್ದಾರೆ.

Ration-Card-General-Image-copy-

ಈ ವರ್ಷ ಕ್ಯಾನ್ಸಲ್‌ ಆಗಿದ್ದೆಷ್ಟು?

ಅನರ್ಹರಿಗೆ ಪಡಿತರ ನೀಡದಂತೆ ತಡೆಯಲು ಸರ್ಕಾರ ಅಭಿಯಾನ ನಡೆಸುತ್ತಿದೆ. ಆ.31ರ ಒಳಗೆ ಪಡಿತರ ಚೀಟಿದಾರರ ಕುಟುಂಬದ ಸದಸ್ಯರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು. ನ್ಯಾಯಬೆಲೆ ಅಂಗಡಿಗಳಲ್ಲೇ ಕೆವೈಸಿ ಮಾಡಿಸಲು ಸೂಚಿಸಲಾಗಿದೆ. ಇಲ್ಲವಾದಲ್ಲಿ ಪಡಿತರ ಚೀಟಿ ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ.

ಇನ್ನೊಂದೆಡೆ ಶಿವಮೊಗ್ಗ ಜಿಲ್ಲೆಯಲ್ಲಿ ಈ ವರ್ಷ 866 ಪಡಿತರ ಚೀಟಿ ಕ್ಯಾನ್ಸಲ್‌ ಆಗಿವೆ. ಜನವರಿಯಲ್ಲಿ 134 ಕಾರ್ಡ್‌ ರದ್ದುಗೊಳಿಸಲಾಗಿದೆ. ಫೆಬ್ರವರಿಯಲ್ಲಿ 116, ಮಾರ್ಚ್‌ನಲ್ಲಿ 200, ಏಪ್ರಿಲ್‌ 6, ಮೇ 16, ಜೂನ್‌ 117, ಜುಲೈನಲ್ಲಿ  277 ಕಾರ್ಡುಗಳು ಕಾನ್ಸಲ್‌ ಆಗಿವೆ.

ಬಿಪಿಎಲ್‌ ಕಾರ್ಡ್‌ಗೆ ಅರ್ಹತೆ ಏನು?

ಅರ್ಹರಾಗಿದ್ದರೂ ಬಿ.ಪಿ.ಎಲ್‌ ಪಡಿತರ ಚೀಟಿ ಹೊಂದಿರುವ ಕುಟುಂಬಗಳು ಹೆಚ್ಚಿವೆ. ಇಂತಹವರ ಪತ್ತೆ ಹೆಚ್ಚಿ ಕಾರ್ಡ್‌ ರದ್ದುಗೊಳಿಸಲಾಗುತ್ತಿದೆ. ಅಲ್ಲದೆ ದಂಡವನ್ನೂ ವಿಧಿಸಲಾಗುತ್ತಿದೆ. ಇನ್ನು, ಯಾರೆಲ್ಲ ಬಿಪಿಎಲ್‌ ಕಾರ್ಡ್‌ ಹೊಂದಬಹುದು ಎಂಬುದಕ್ಕೆ ಸರ್ಕಾರದ ಮಾನದಂಡವಿದೆ.

» ಮಾನದಂಡ 1 : ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂ.ಗಿಂತಲು ಕಡಿಮೆ ವರಮಾನ ಹೊಂದಿರಬೇಕು.

»  ಮಾನದಂಡ 2 : ಗ್ರಾಮೀಣ ಭಾಗದಲ್ಲಿ ಮೂರು ಹೆಕ್ಟೇರ್‌ಗಿಂತಲು ಕಡಿಮೆ ಒಣ ಅಥವಾ ನೀರಾವರಿ ಜಮೀನು ಹೊಂದಿರುವವರು. ನಗರ ಪ್ರದೇಶದಲ್ಲಿ 1000 ಚದರ ಅಡಿಗಿಂತಲೂ ಕಡಿಮೆ ವಿಸ್ತೀರ್ಣದ ಸ್ವಂತ ಪಕ್ಕಾ ಮನೆ ಹೊಂದಿರುವವರು.

» ಮಾನದಂಡ 3 : ಜೀವನೋಪಾಯಕ್ಕೆ ಟ್ರಾಕ್ಟರ್‌, ಮ್ಯಾಕ್ಸಿ ಕ್ಯಾಬ್‌, ಟ್ಯಾಕ್ಸಿ ಹೊಂದಿರುವವರು ಅರ್ಹರು. ಸ್ವಂತ ಬಳಕೆಗೆ ನಾಲ್ಕು ಚಕ್ರದ ವಾಹನವಿದ್ದರೆ ಅವರು ಅರ್ಹರಲ್ಲ.

» ಮಾನದಂಡ 4 : ಸರ್ಕಾರಿ ಉದ್ಯೋಗಿಗಳು, ಆದಾಯ ತರಿಗೆ, ವೃತ್ತಿ ತೆರಿಗೆ ಪಾವತಿಸುವವರು ಬಿಪಿಎಲ್‌ ಕಾರ್ಡ್‌ಗೆ ಅರ್ಹರಲ್ಲ.

ಅರ್ಹರಲ್ಲದವರು ತಮ್ಮ ಕಾರ್ಡುಗಳನ್ನು ಹಿಂತಿರುಗಿಸಬೇಕು. ಇಲ್ಲವಾದಲ್ಲಿ ಅಂತಹವರ ವಿರುದ್ಧ ದಂಡ ವಿಧಿಸಲಾಗುತ್ತಿದೆ.

ಇದನ್ನೂ ಓದಿ ⇒ ಪಡಿತರ ಚೀಟಿದಾರರೆ ಗಮನಿಸಿ, ಆ.31 ಕೊನೆ ದಿನ, ತಪ್ಪಿದರೆ ಪಡಿತರ ಸಿಗಲ್ಲ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 26, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment