FATAFAT NEWS, 31 AUGUST 2024
ಸಾಲಬಾಧೆಗೆ ವಿಷ ಸೇವಿಸಿ ರೈತ ಆತ್ಮಹತ್ಯೆ
ಶಿವಮೊಗ್ಗ ಲೈವ್.ಕಾಂ : ಹೊಸನಗರದ ಮುಂಡಳ್ಳಿ ಸಮೀಪದ ನರ್ತಿಗೆ ಗ್ರಾಮದಲ್ಲಿ ಸಾಲ ಬಾಧೆಯಿಂದ ರೈತರೊಬ್ಬರು ಜಮೀನಿನಲ್ಲಿಯೇ ಶುಕ್ರವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎನ್.ಟಿ.ತಿಮ್ಮಪ್ಪ (52) ಮೃತ ರೈತ. ಕೃಷಿಗಾಗಿ ತನ್ನ ಹಾಗು ಪತ್ನಿ ಹೆಸರಲ್ಲಿ 6.5 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಕೃಷಿಯಲ್ಲಿ ಹೆಚ್ಚಿನ ಆದಾಯ ಬಾರದ ಕಾರಣ ಸಾಲಬಾಧೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ತಿಮ್ಮಪ್ಪ ಪುತ್ರ ಅಮಿತ್ ನೀಡಿದ ದೂರಿನನ್ವಯ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![]() |
ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿ ಸಾವು
ಶಿವಮೊಗ್ಗ ಲೈವ್.ಕಾಂ : ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಸುಸ್ತಾಗಿ ಮಲಗಿದ್ದ ಸುಮಾರು 50 ರಿಂದ 55 ವರ್ಷ ವಯಸ್ಸಿನ ಅಪರಿಚಿತ ಪುರುಷ ಮೃತಪಟ್ಟಿದ್ದಾರೆ. ಆ.24 ರಂದು ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ಪರೀಕ್ಷಿಸಿ, ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮೃತ ವ್ಯಕ್ತಿಯ ಹಣೆ ಮಧ್ಯ ಭಾಗದಲ್ಲಿ ಕಪ್ಪು ಹಚ್ಚೆ ಇದೆ. ಮೃತರ ವಾರಸುದಾರರು ಯಾರಾದರೂ ಇದ್ದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ, ದೂ.ಸಂ: 08182-261414, 9916882544 ನ್ನು ಸಂಪರ್ಕಿಸಬಹುದು ಎಂದು ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಓಮ್ನಿ ಕಾರು, ಬೈಕ್ ಮುಖಾಮುಖಿ ಡಿಕ್ಕಿ
ಶಿವಮೊಗ್ಗ ಲೈವ್.ಕಾಂ : ರಿಪ್ಪನ್ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ಗುರುವಾರ ರಾತ್ರಿ ಬೈಕ್ ಮತ್ತು ಮಾರುತಿ ಓಮ್ನಿ ಕಾರು ಮುಖಾಮುಖಿ ಡಿಕ್ಕಿಯಾಗಿ ಮೂವರಿಗೆ ಗಂಭೀರ ಗಾಯವಾಗಿವೆ. ಬೈಕ್ ಸವಾರರಾದ ಕಗ್ಗಲಿಜೆಡ್ಡು ಗ್ರಾಮದ ಆದಿತ್ಯ, ಯಶವಂತ್, ಓಮ್ನಿ ಚಾಲಕ ಅಭಿಷೇಕ್ ಗಾಯಳುಗಳು. ಮಳವಳ್ಳಿ ಕ್ರಾಸ್ನಲ್ಲಿ ಅಪಘಾತವಾಗಿದ್ದು, ಕೈ ಮತ್ತು ತಲೆಗೆ ಗಂಭೀರ ಗಾಯಗಳಾಗಿವೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಟೆಗಂಗೂರಿನಲ್ಲಿ ಇಬ್ಬರು ಬಂಧನ
ಶಿವಮೊಗ್ಗ ಲೈವ್.ಕಾಂ : ಕೋಟೆಗಂಗೂರು ಗ್ರಾಮದ ಖಾಲಿ ಲೇಔಟ್ನಲ್ಲಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ಬಂಧಿಸಲಾಗಿದೆ. ಆನಂದಪುರಂ ನಿವಾಸಿಗಳಾದ ಯಾಸೀನ್ ಬೇಗ್ (23), ಮುಬಾರಕ್ ಬೇಗ್ (28) ಬಂಧಿತ ಆರೋಪಿಗಳು. ಇವರಿಂದ ಅಂದಾಜು 8 ಸಾವಿರ ರೂ. ಮೌಲ್ಯದ 582 ಗ್ರಾಂ ಒಣ ಗಾಂಜಾ ಹಾಗೂ ಅಂದಾಜು 80 ಸಾವಿರ ರೂ. ಮೌಲ್ಯದ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೊಡ್ಡದಾನವಂದಿ ಬಳಿ ಸೂಳೆಬೈಲು ಯುವಕನ ಬಂಧನ
ಶಿವಮೊಗ್ಗ ಲೈವ್.ಕಾಂ : ಕುಂಸಿ ಸಮೀಪದ ದೊಡ್ಡ ದಾನವಂದಿಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದವನನ್ನು ಪೊಲೀಸರು ಗುರುವಾರ ತಡರಾತ್ರಿ ಬಂಧಿಸಿದ್ದಾರೆ. ಶಿವಮೊಗ್ಗದ ಸೂಳೆಬೈಲಿನ ಸೈಯದ್ ಸದ್ದಾಂ (33) ಬಂಧಿತ. 3.500 ರೂ. ಮೌಲ್ಯದ 120 ಗ್ರಾಂ ಒಣ ಗಾಂಜಾ, 25 ಸಾವಿರ ರೂ. ಮೌಲ್ಯದ ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ ⇒ ಶಿವಮೊಗ್ಗ ಜೈಲಿನಲ್ಲಿ ಕೈದಿಗಳ ಬ್ಯಾರೆಕ್ನಲ್ಲಿ ಮೊಬೈಲ್ ಚಾರ್ಜರ್, ಚಿಲುಮೆ, ಬೀಡಿ, ಸಿಗರೇಟ್..!
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200