| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIMOGA CITY FATAFAT NEWS, 3 SEPTEMBER 2024
ಇಡೀ ದಿನ ಶಿವಮೊಗ್ಗ ನಗರದಲ್ಲಿ ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ಟಾಪ್ 10 ಸುದ್ದಿಗಳು.
» ಸರ್ವಧರ್ಮ ಶಾಂತಿ ಸಭೆ ಜಿಲ್ಲಾಧಿಕಾರಿ ಕಚೇರಿ : ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಗಳ ಪ್ರಯುಕ್ತ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧ್ಯಕ್ಷತೆಯಲ್ಲಿ ಸರ್ವಧರ್ಮ ಶಾಂತಿ ಸಭೆ ನಡೆಯಿತು. ಧಾರ್ಮಿಕ ಮುಖಂಡರು, ವಿವಿಧ ಸಂಘಟನೆಗಳ ಪ್ರಮುಖರು ಅಭಿಪ್ರಾಯ ತಿಳಿಸಿದರು. ಶಾಸಕರಾದ ಶಾರದಾ ಪೂರ್ಯಾನಾಯ್ಕ್, ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ಡಾ.ಧನಂಜಯ ಸರ್ಜಿ, ಬಲ್ಕಿಷ್ ಬಾನು, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಪಾಲಿಕೆ ಕಮಿಷನರ್ ಕವಿತಾ ಯೋಗಪ್ಪನವರ್ ಸೇರಿದಂತೆ ಹಲವರು ಪ್ರಮುಖರು ಇದ್ದರು.![]()

ಪೊಲೀಸ್ ಕಚೇರಿ : ಗಣೇಶ ಚತುರ್ಥಿ, ಈದ್ ಮಿಲಾದ್ ಹಬ್ಬದ ಹಿನ್ನೆಲೆ ಪೊಲೀಸ್ ಇಲಾಖೆ ಸಭೆ. ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಆರ್.ಹಿತೇಂದ್ರ ಸಭೆ ನಡೆಸಿದರು. ಡಿವೈಎಸ್ಪಿಗಳು, ಇನ್ಸ್ಪೆಕ್ಟರ್ಗಳು, ಸಬ್ ಇನ್ಸ್ಪೆಕ್ಟರ್ಗಳು ವಿಮರ್ಶಾ ಸಭೆಯಲ್ಲಿ ಭಾಗವಹಿಸಿದ್ದರು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಎಎಸ್ಪಿಗಳಾದ ಅನಿಲ್ ಕುಮಾರ್ ಭೂಮರೆಡ್ಡಿ ಮತ್ತು ಕಾರಿಯಪ್ಪ ಉಪಸ್ಥಿತರಿದ್ದರು. ಇದಕ್ಕೂ ಮೊದಲು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಗೌರವ ವಂದನೆ ಸಲ್ಲಿಸಲಾಯಿತು.![]()
» ಎಡಿಜಿಪಿ ನೇತೃತ್ವದಲ್ಲಿ ವಿಮರ್ಶಾ ಸಭೆ

ಪತ್ರಿಕಾ ಭವನ : ರಾಜ್ಯಪಾಲರು ತನಿಖೆಗೆ ಆದೇಶಿಸಿರುವ ಹಿನ್ನೆಲೆ ಅವರ ಭಾವಚಿತ್ರ ಸುಡುವುದು, ಅವಹೇಳನ ಮಾಡುವುದು, ರಾಜಭವನ ಚಲೋ ಹಮ್ಮಿಕೊಳ್ಳುವುದು ಸರಿಯಲ್ಲ. ಕಾಂಗ್ರೆಸ್ ಪಕ್ಷ ಅರ್ಥಹೀನ ರಾಜಕೀಯ ಮಾಡುತ್ತಿದೆ. ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪ.![]()
» ಕಾಂಗ್ರೆಸ್ನದ್ದು ಅರ್ಥಹೀನ ರಾಜಕೀಯ

ಶಾಸಕರ ಕಚೇರಿ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಒಕ್ಕಲಿಗ ಅಭಿವೃದ್ಧಿ ನಿಗಮ ಮತ್ತು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಿದ್ದ ಫಲಾನುಭವಿಗಳಿಗೆ ಶಾಸಕ ಚನ್ನಬಸಪ್ಪ ಮಂಜೂರಾತಿ ಪತ್ರ, ಹೊಲಿಗೆ ಯಂತ್ರ ವಿತರಿಸಿದರು. 52.40 ಲಕ್ಷ ರೂ. ಮೊತ್ತದ ಮಂಜೂರಾತಿ ಪತ್ರ ವಿತರಿಸಲಾಯಿತು. ಜಿಲ್ಲಾ ವ್ಯವಸ್ಥಾಪಕ ನಿರ್ದೇಶಕಿ ಮಹಾದೇವಿ ಸೇರಿದಂತೆ ಹಲವರು ಇದ್ದರು.![]()
» ಫಲಾನುಭವಿಗಳಿಗೆ ಮಂಜೂರಾತಿ ಪತ್ರ

ಜಿಲ್ಲಾ ಪಂಚಾಯಿತಿ : ಮಾನಸಿಕ ಆರೋಗ್ಯ, ಅಪೌಷ್ಠಿಕತೆ, ಹೆಣ್ಣು ಮಕ್ಕಳಿಗೆ ಮುಟ್ಟಿನ ನೈರ್ಮಲ್ಯದ ಕುರಿತು ಜಾಗೃತಿ ಮೂಡಸಬೇಕು. ಗ್ರಾಮ ಆರೋಗ್ಯದ ಕುರಿತು ಅರಿವು ಮೂಡಿಸಬೇಕು ಎಂದು ಗ್ರಾಮ ಆರೋಗ್ಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿ.ಪಂ ಸಿಇಒ ಎನ್.ಹೇಮಂತ್ ತಿಳಿಸಿದರು.![]()
» ಗ್ರಾಮ ಆರೋಗ್ಯದ ಅರಿವು ಮೂಡಿಸಿ
ಪತ್ರಿಕಾ ಭವನ : ಜಮಾ ಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗದ ವತಿಯಿಂದ ಸೆ.1 ರಿಂದ 30ರವರೆಗೆ ನೈತಿಕತೆಯೇ ಸ್ವಾತಂತ್ರ್ಯ ಅಭಿಯಾನ ನಡೆಸಲಾಗುತ್ತದೆ ಎಂದು ಜಿಲ್ಲಾ ಸಂಚಾಲಕಿ ನಜೀಮಾ ಬೇಗಂ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ವಿವಿಧೆಡೆ ವಿಚಾರ ಸಂಕಿರಣ, ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಆಯೋಜಿಸಲಾಗುತ್ತದೆ ಎಂದರು.![]()
» ನೈತಿಕತೆಯೇ ಸ್ವಾತಂತ್ರ್ಯ ಅಭಿಯಾನ

ಜಿಲ್ಲಾಧಿಕಾರಿ ಕಚೇರಿ : ಹಣಕಾಸು ಸಂಸ್ಥೆಗಳು ಜನರಿಂದ ಠೇವಣಿ ಇರಿಸಿಕೊಂಡು ಹಣ ಮರುಪಾವತಿ ಮಾಡದೆ ವಂಚಿಸುತ್ತಿವೆ. ಇಂತಹ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ವಂಚನೆ ಸಂತ್ರಸ್ತ ಠೇವಣಿದಾರರ ಕುಟುಂಬಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದವು.![]()
» ವಂಚಕ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಅಗ್ರಹ
ಪತ್ರಿಕಾ ಭವನ : ಜೆಡಿಎಸ್ ನಗರ ಯುವ ಘಟಕದ ವತಿಯಿಂದ ಸದಸ್ಯತ್ವ ಅಭಿಯಾನ ನಡೆಸಲಾಗುತ್ತಿದೆ. 32 ವಾರ್ಡ್ಗಳ 288 ಬೂತ್ಗಳಲ್ಲಿ 30 ಸಾವಿರ ಸದಸ್ಯತ್ವ ಮಾಡುವ ಗುರಿ ಇದೆ ಎಂದು ಯುವ ಘಟಕದ ನಗರ ಅಧ್ಯಕ್ಷ ಸಂಜಯ್ ಎಸ್.ಕಶ್ಯಪ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.![]()
» ಯುವ ಘಟಕದ ಸದಸ್ಯತ್ವ ಅಭಿಯಾನ

ಜಿಲ್ಲಾಧಿಕಾರಿ ಕಚೇರಿ : ಭದ್ರಾವತಿ ತಾಲೂಕಿನಲ್ಲಿ ಇಸ್ಪೀಟು, ಗಾಂಜಾ ಸೇರಿದಂತೆ ಎಗ್ಗಿಲ್ಲದೆ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು. ಬಡ್ಡಿ ದಂಧೆಯಿಂದ ಜನರನ್ನು ಪಾರು ಮಾಡಬೇಕು ಎಂದು ಆಗ್ರಹಿಸಿ ಭದ್ರಾವತಿ ಹಿತರಕ್ಷಣ ವೇದಿಕೆ ಅಧ್ಯಕ್ಷ ಏಸುಕುಮಾರ್, ಉಪಾಧ್ಯಕ್ಷ ತೀರ್ಥೇಶ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.![]()
» ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ
ಪತ್ರಿಕಾ ಭವನ : ಸರ್ಕಾರದ ಅನುಮತಿ ಇಲ್ಲದಿದ್ದರು ಶಿವಮೊಗ್ಗ ಮಹಾನಗರ ಪಾಲಿಕೆಯ ಹಿಂದಿನ ಸದಸ್ಯರು ಮೆಡಿಕಲ್ ಕ್ಲೇಮ್ ಪಡೆದಿದ್ದಾರೆ. ಈ ಸದಸ್ಯರ ವಿರುದ್ಧ ಕಾನೂನು ಹೋರಾಟ ನಡೆಸಲಾಗುತ್ತದೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಮನೋಹರ್ ಗೌಡ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.![]()
» ನ್ಯಾಯಾಲಯದಲ್ಲಿ ಹೋರಾಟಕ್ಕೆ ಸಿದ್ಧ

ಇದನ್ನೂ ಓದಿ » ಸೆಪ್ಟೆಂಬರ್ ತಿಂಗಳು, ಕರ್ನಾಟಕದಲ್ಲಿ 9 ದಿನ ಬ್ಯಾಂಕುಗಳಿಗೆ ರಜೆ, ಕಾರಣವೇನು?
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
![]()