ಶಿವಮೊಗ್ಗ ಸಿಟಿಯಲ್ಲಿ ಎರಡು ದಿನ ಕುಡಿಯುವ ನೀರು ಬರಲ್ಲ

SHIMOGA NEWS, 14 SEPTEMBER 2024 : ನಗರದಲ್ಲಿ ಎರಡು ದಿನ ನೀರು (Drinking Water) ಪೂರೈಕೆ ವ್ಯತ್ಯಯವಾಗಲಿದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಮಹಾನಗರ ಪಾಲಿಕೆ ವತಿಯಿಂದ ಭೂಗತ ಕೇಬಲ್‌ ಅಳವಡಿಕೆ ಮಾಡಲಾಗಿದೆ. ಇದನ್ನು ಚಾಲನೆಗೊಳಿಸಲಾಗುತ್ತಿದೆ. ಆದ್ದರಿಂದ ಸೆ.18ರಂದು ಘಟಕಕ್ಕೆ ವಿದ್ಯುತ್‌ ವ್ಯತ್ಯಯವಾಗಲಿದೆ. ಹಾಗಾಗಿ ಸೆ.18 ಮತ್ತು 19ರಂದು ಶಿವಮೊಗ್ಗ ನಗರದಲ್ಲಿ ನೀರು ಪೂರೈಕೆ ವ್ಯತ್ಯಯವಾಗಲಿದೆ ಎಂದು ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ » ಶಿವಮೊಗ್ಗ ಸಿಟಿ ಕೇಸರಿಮಯ, ಎಲ್ಲೆಲ್ಲಿ ಹೇಗಿದೆ ಅಲಂಕಾರ?

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment