ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 17 SEPTEMBER 2024 : ಪ್ರತಿಷ್ಠಿತ ಹಿಂದು (Hindu) ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಗೆ ಶಿವಮೊಗ್ಗ ನಗರ ಸಂಪೂರ್ಣ ಸಜ್ಜಾಗಿದೆ. ಇಂದು ಬೆಳಗ್ಗೆ ಕೋಟೆ ರಸ್ತೆಯ ಶ್ರೀ ಭೀಮೇಶ್ವರ ದೇವಸ್ಥಾನದಿಂದ ಗಣಪತಿಯ ಅದ್ದೂರಿ ರಾಜಬೀದಿ ಉತ್ಸವ ಆರಂಭವಾಗಲಿದೆ.
ಗಣಪತಿ ಮೆರವಣಿಗೆ ಹಿನ್ನೆಲೆ ಗಾಂಧಿಬಜಾರ್, ಅಮೀರ್ ಅಹಮ್ಮದ್ ವೃತ್ತ ಸೇರಿ ಇಡೀ ನಗರ ಕೇಸರಿಮಯವಾಗಿದೆ. ಪ್ರಮುಖ ರಸ್ತೆಗಳಲ್ಲಿ ಕೇಸರಿ ಧ್ವಜ, ಬಂಟಿಂಗ್ಸ್‌ಗಳನ್ನು ಹಾಕಲಾಗಿದೆ. ವೀರ ಸಾವರ್ಕರ್ ಹಿಂದು ಸಂಘಟನಾ ಮಹಾಮಂಡಳಿಯು 80ನೇ ವರ್ಷದ ಶ್ರೀ ವರಸಿದ್ಧಿ ವಿನಾಯಕ ಸ್ವಾಮಿಯನ್ನು ಭೀಮೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಿದ್ದು ಗಣಪತಿ ಮೆರವಣಿಗೆ ಹಿನ್ನೆಲೆಯಲ್ಲಿ ನಗರಾದ್ಯಂತ ಸಿದ್ಧತೆ ನಡೆದಿದೆ. ಶ್ರೀ ಮಾರಿಕಾಂಬಾ ದೇವಸ್ಥಾನದ ಬಳಿ ಗಣೇಶೋತ್ಸವದ ಮಹಾಮಂಗಳಾರತಿ ನಡೆಯಲಿದೆ. ಬಳಿಕ ರಾಜಬೀದಿ ಉತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾಗಲಿದ್ದಾರೆ.ಶಿವಮೊಗ್ಗ ನಗರ ಕೇಸರಿಮಯ
ಯಾವ ದಾರಿಯಲ್ಲಿ ಸಾಗುತ್ತೆ ಮೆರವಣಿಗೆ?
ಭೀಮೇಶ್ವರ ದೇವಸ್ಥಾನದಿಂದ ಕೋಟೆ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿಬಜಾರ್, ಶಿವಪ್ಪ ನಾಯಕ ವೃತ್ತ, ಬಿ.ಹೆಚ್.ರಸ್ತೆ, ಅಮೀರ್ ಅಹ್ಮದ್ ವೃತ್ತ, ನೆಹರು ರಸ್ತೆ, ಟೀ. ಸೀನಪ್ಪ ಶೆಟ್ಟಿ ವೃತ್ತ, ದುರ್ಗಿಗುಡಿ, ಜೈಲ್ ವೃತ್ತ, ಕುವೆಂಪು ರಸ್ತೆ, ಶಿವಮೂರ್ತಿ ವೃತ್ತ, ಮಹಾವೀರ ವೃತ್ತ, ಸರ್.ಎಂ.ವಿ.ರಸ್ತೆ, ಬಿ.ಹೆಚ್.ರಸ್ತೆ, ಕೋಟೆ ಪೊಲೀಸ್ ಠಾಣೆ ರಸ್ತೆ, ಕೋಟೆ ಭೀಮೇಶ್ವರ ದೇವಸ್ಥಾನದ ಪಕ್ಕದಲ್ಲಿ ಭೀಮನ ಮಡುವಿನಲ್ಲಿ ವಿಸರ್ಜನೆಯಾಗಲಿದೆ.
ಇದನ್ನೂ ಓದಿ » ಶಿವಮೊಗ್ಗ ಡಿ.ಸಿ. ಕಚೇರಿ ಚರಾಸ್ತಿ ಜಪ್ತಿಗೆ ಕೋರ್ಟ್ ಆದೇಶ, ಕಾರಣವೇನು?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422