ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SORABA NEWS, 22 SEPTEMBER 2024 : ಕುಟುಂಬದವರೆಲ್ಲ ಈದ್ ಮಿಲಾದ್ ಮೆರವಣಿಗೆ ನೋಡಲು ತೆರಳಿದ್ದಾಗ ಮನೆಯ ಬಾಗಿಲಿನ ಚಿಲಕ ಮುರಿದು ಕಳ್ಳತನ ಮಾಡಲಾಗಿದೆ. ಕೊಠಡಿಯಲ್ಲಿದ್ದ (ROOM) ಬೀರುವನ್ನು ಅಡ್ಡಲಾಗಿ ಬೀಳಿಸಿ, ಬಾಗಿಲನ್ನು ಮೀಟಿ ತೆಗೆದು ಚಿನ್ನಾಭರಣ, ನಗದು ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ.
ಸೊರಬ ತಾಲೂಕು ಆನವಟ್ಟಿ ಸಮೀಪದ ತಲಗಡ್ಡೆ ಗ್ರಾಮದ ಮೊಹಮದ್ ಸಾದಿಕ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಬೀರುವಿನಲ್ಲಿದ್ದ 70 ಸಾವಿರ ರೂ. ನಗದು, ಚಿನ್ನದ ಸರ, ಉಂಗುರುಗಳು ಸೇರಿ 75 ಸಾವಿರ ರೂ. ಮೌಲ್ಯದ ಚಿನ್ನಾಭರಣ ಕಳುವಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ತಲಗಡ್ಡೆಯಲ್ಲಿ ಈದ್ ಮಿಲಾದ್ ಮೆರವಣಿಗೆ ಮುಗಿಸಿ ರಾತ್ರಿ 3.30ರ ಹೊರತ್ತಿಗೆ ಮೊಹಮದ್ ಸಾದಿಕ್ ಅವರು ಕುಟುಂಬ ಸಹಿತ ಮನೆಗೆ ಮರಳಿದ್ದಾರೆ. ಆಗ ಮನೆಯ ಚಿಲಕ ತೆಗೆದಿತ್ತು. ಗಾಬರಿಯಿಂದ ಒಳಗೆ ಹೋಗಿ ಪರಿಶೀಲಿಸಿದಾಗ ಕಳ್ಳತನವಾಗಿದೆ. ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ ಸಿಟಿ ಹಸಿರುಮಯ, ಎಎ ಸರ್ಕಲ್ ಜಗಮಗ
LATEST NEWS
- ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

- ಮಾರ್ಚ್ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

- ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

- ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು
















