ಸುಳ್ಳು ಸುದ್ದಿ ಸೃಷ್ಟಿಕರ್ತರಿಗೆ ಬಿಸಿ ಮುಟ್ಟಿಸಲು ರೆಡಿಯಾದ ಸರ್ಕಾರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

JUST MAHITI : ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಸೃಷ್ಟಿಸಿ, ಹಬ್ಬಿಸುವವರಿಗೆ ಬಿಸಿ ಮುಟ್ಟಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆ ಕಾನೂನು ರೂಪಿಸಿದ್ದು, ಫ್ಯಾಕ್ಟ್‌ ಚೆಕ್‌ (Fact Check) ಮಾಡಲಾಗುತ್ತದೆ. ಸುಳ್ಳು ಸುದ್ದಿ ಪತ್ತೆಗೆ ಪೊಲೀಸ್‌ ಠಾಣೆಗಳಲ್ಲಿ ಪ್ರತ್ಯೇಕ ತಂಡ ಕಾರ್ಯಾಚರಿಸಲಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ಮೈಸೂರಿನ ಮಾನಸ ಗಂಗೋತ್ರಿ ಆವರಣದಲ್ಲಿ ಮೈಸೂರು ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇವತ್ತು ಎಲ್ಲರು ಪತ್ರಕರ್ತರಾಗಿದ್ದಾರೆ. ಆದರೆ ಪತ್ರಕರ್ತರಲ್ಲದವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ತಮ್ಮ ವಿರುದ್ಧವು ಸುಳ್ಳು ಸುದ್ದಿಗಳನ್ನು ಸೃಷ್ಟಿಸಲಾಗಿದೆ. ಫೇಕ್‌ ನ್ಯೂಸ್‌ಗಳಿಂದಾಗಿ ಧಾರ್ಮಿಕ, ಸಾಮಾಜಿಕ ಘರ್ಷಣೆಗಳು ಉಂಟಾಗುತ್ತವೆ. ನಮ್ಮ ಜೊತೆಯಲ್ಲಿರುವವರಿಗೇ ತೊಂದರೆಯಾಗಲಿದೆ. ಅದ್ದರಿಂದ ಇದರ ನಿಯಂತ್ರಣ ಮಾಡಬೇಕಿದೆ ಎಂದರು.

ಫೇಕ್‌ ನ್ಯೂಸ್‌ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ ಕೊಡಿಸಲು ಕಾನೂನು ರೂಪಿಸಲಾಗಿದೆ. ಠಾಣೆಗಳಲ್ಲಿ ಪ್ರತ್ಯೇಕ ತಂಡ ಫ್ಯಾಕ್ಟ್‌ ಚೆಕ್‌ ಮಾಡಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದ ಕ್ರಾಂತಿದೀಪ ಪತ್ರಿಕೆ ಸಂಪಾದಕರಿಗೆ ಪ್ರತಿಷ್ಠಿತ ಪ್ರಶಸ್ತಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 22, 2024

Leave a Comment