ಶಿವಮೊಗ್ಗದಿಂದ ದೆಹಲಿಗೆ ವಿಮಾನ, ಮುಂಬೈಗೆ ಯಾಕೆ ಸಿಕ್ತಿಲ್ಲ ಕ್ಲಿಯರೆನ್ಸ್?‌ ಸಂಸದರು ಹೇಳಿದ್ದೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIMOGA NEWS, 24 SEPTEMBER 2024 : ಶಿವಮೊಗ್ಗದಿಂದ ಚೆನ್ನೈ, ಹೈದರಾಬಾದ್‌ಗೆ ಸ್ಪೈಸ್‌ ಜೇಟ್‌ ವಿಮಾನಯಾನ (Flight) ಸಂಸ್ಥೆ ಸೇವೆ ಆರಂಭಿಸುತ್ತಿದೆ. ಇದರ ನಡುವೆ ಮತ್ತೆರಡು ಮಹಾನಗರಗಳಿಗೆ ಶಿವಮೊಗ್ಗದಿಂದ ವಿಮಾನ ಸೇವೆ ಒದಗಿಸುವ ಪ್ರಯತ್ನ ನಡೆಯುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ರಾಘವೇಂದ್ರ, ಉಡಾನ್‌ ಯೋಜನೆ ಅಡಿ ದೆಹಲಿಗೆ ವಿಮಾನಯಾನಕ್ಕೆ ನಿರ್ಧಾರವಾಗಿದೆ. ಇದಕ್ಕೆ ಟೆಂಡರ್‌ ಆಗಿದೆ. ಸದ್ಯದಲ್ಲೇ ಈ ಮಾರ್ಗದಲ್ಲಿ ವಿಮಾನ ಹಾರಾಟ ಶುರುವಾಗಲಿದೆ. ಮುಂಬೈಗೆ ಸಂಪರ್ಕ ಕಲ್ಪಿಸುವ ಪ್ರಯತ್ನವಾಗುತ್ತಿದೆ. ಆದರೆ ಮುಂಬೈನಲ್ಲಿ ನಿತ್ಯ ಸಾವಿರ ವಿಮಾನಗಳ ಹಾರಾಟ ನಡೆಸುತ್ತಿವೆ. ಟ್ರಾಫಿಕ್‌ ಕ್ಲಿಯರೆನ್ಸ್‌ ಸಿಗುತ್ತಿಲ್ಲ. ಅದರೂ ಪ್ರಯತ್ನವಾಗುತ್ತಿದೆ ಎಂದರು.

MP-BY-raghavendra-about-Shimoga-Airport-Flight

ಇನ್ನು, ಸ್ಪೈಸ್‌ ಜೆಟ್‌ ವಿಮಾನಯಾನ ಸಂಸ್ಥೆಯು ಅ.10ರಂದು ಚೆನ್ನೈ ಮತ್ತು ಹೈದರಾಬಾದ್‌ಗೆ ಸೇವೆ ಆರಂಭಿಸಲಿದೆ. ಇನ್ನೊಂದೆಡೆ ಶಿವಮೊಗ್ಗ – ಗೋವಾ, ತಿರುಪತಿ ಮಾರ್ಗದಲ್ಲಿ ಸ್ಥಗಿತವಾಗಿದ್ದ ವಿಮಾನಯಾನ ಸೇವೆ ಪುನಾರಂಭವಾಗಲಿದೆ. ಭವಿಷ್ಯದಲ್ಲಿ ಇದು ಮಧ್ಯ ಕರ್ನಾಟಕದಲ್ಲಿ ಪ್ರಮುಖ ವಿಮಾನ ನಿಲ್ದಾಣವಾಗಲಿದೆ. ವಾಣಿಜ್ಯೋದ್ಯಮಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಇದನ್ನೂ ಓದಿ » ಶಿವಮೊಗ್ಗ ಏರ್‌ಪೋರ್ಟ್‌ ಲೈಸೆನ್ಸ್‌ ವಿಚಾರ, ಎಂಪಿ ಮಹತ್ವದ ಹೇಳಿಕೆ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment