ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಅನುಮಾನಾಸ್ಪದ ಸಾವು

KARGAL NEWS, 21 SEPTEMBER 2024 : ಜೋಗ-ಕಾರ್ಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಿನ್ನಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಮನೆಯಲ್ಲಿ ಮಲಗಿದ್ದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ರವಿಕುಮಾರ್ ಜೈನ್ (48) ಅವರ ತಲೆಗೆ ತೀವ್ರವಾದ ಹೊಡೆತ ಬಿದ್ದಿದ್ದು (Suspicious), ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಮೃತಪಟ್ಟಿದ್ದಾರೆ.

ಎಂದಿನಂತೆ ಮಂಗಳವಾರ ಸಂಘದ ಕೆಲಸ ಮುಗಿಸಿ ಮನೆಗೆ ಮರಳಿ ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದ ರವಿಕುಮಾರ್ ಅವರ ತಲೆಗೆ ಬಲವಾದ ಹೊಡೆತ ಬಿದ್ದಿದ್ದು, ಅವರ ತಾಯಿ ಸಂಜೆ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.

ರಕ್ತದ ಮಡುವಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ರವಿಕುಮಾ‌ರ್ ಅವರನ್ನು ಅಕ್ಕಪಕ್ಕದವರ ಸಹಾಯದಿಂದ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿ ಯಾಗದೇ ಮೃತಪಟ್ಟಿದ್ದಾರೆ. ಅವಿವಾಹಿತ ರಾಗಿದ್ದ ಮೃತ ವ್ಯಕ್ತಿ ಮಿತ ಭಾಷಿಯಾಗಿದ್ದು, ಘಟನೆ ಗ್ರಾಮಸ್ಥರಲ್ಲಿ ದಿಗ್ಧಮೆ ಮೂಡಿಸಿದೆ. ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಸಾ ಮಿಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಮಾಲೀಕನ ಮಗ

Kalleshwara-Enterprises.webp
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment