ಶಿವಮೊಗ್ಗದಲ್ಲಿ ಹೃದಯ ಉಚಿತ ತಪಾಸಣೆ ಶಿಬಿರ, ಎಲ್ಲಿ? ಯಾರೆಲ್ಲ ಭಾಗವಹಿಸಬಹುದು?

Published On : ಸೆಪ್ಟೆಂಬರ್ 26, 2024

Published By : ನಿತಿನ್‌ ಆರ್‌.ಕೈದೊಟ್ಲು 

SHIMOGA NEWS, 21 SEPTEMBER 2024 : ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಿಂದ ವಿಶ್ವ ಹೃದಯ ದಿನದ ಅಂಗವಾಗಿ ಸೆಪ್ಟೆಂಬರ್‌ 29ರಂದು ಹೃದಯ ಉಚಿತ ತಪಾಸಣಾ ಶಿಬಿರ (Camp) ಹಮ್ಮಿಕೊಳ್ಳಲಾಗಿದೆ. 

ನಗರದ ಶಿವಮೂರ್ತಿ ವೃತ್ತದ ಬಳಿಯಿರುವ ನಾರಾಯಣ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್‌ನಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1ರವರೆಗೆ ಶಿಬಿರ ನಡೆಯಲಿದೆ. ಸೆ.28ರ ರಾತ್ರಿ 8ರೊಳಗೆ ಹೆಸರು ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ವರ್ಗೀಸ್ ಪಿ. ಜಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಈ ಶಿಬಿರದಲ್ಲಿ ಉಚಿತವಾಗಿ ಇಸಿಜಿ, ಇಕೋ ಸ್ಕ್ರೀನಿಂಗ್‌, ಜಿಆರ್‌ಬಿಎಸ್‌, ಬಿ.ಪಿ ತಪಾಸಣೆ ಹಾಗೂ ತಜ್ಞ ವೈದ್ಯರೊಂದಿಗೆ ಉಚಿತ ಸಮಾಲೋಚನೆ ನಡೆಸಲಾಗುತ್ತದೆ ಎಂದು ಮಾರುಕಟ್ಟೆ ವಿಭಾಗದ ಮುಖ್ಯಸ್ಥ  ರಾಜಾಸಿಂಗ್ ಹೇಳಿದ್ದಾರೆ. ಹೆಚ್ಚಿನ ವಿವರ ಮತ್ತು ಉಚಿತ ನೋಂದಣಿಗಾಗಿ ಮೊ. 98864 13131 ಸಂಪರ್ಕಿಸಬಹುದು.

ಇದನ್ನೂ ಓದಿ » ಶಿವಮೊಗ್ಗದಿಂದ ದೆಹಲಿಗೆ ವಿಮಾನ, ಮುಂಬೈಗೆ ಯಾಕೆ ಸಿಕ್ತಿಲ್ಲ ಕ್ಲಿಯರೆನ್ಸ್?‌ ಸಂಸದರು ಹೇಳಿದ್ದೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಸೆಪ್ಟೆಂಬರ್ 26, 2024

Leave a Comment