NPS ಬೇಡ, UPS ಬೇಡ, ಶಿವಮೊಗ್ಗದಲ್ಲಿ ನೌಕರರ ಆಗ್ರಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 27 SEPTEMBER 2024 : ಹೊಸ ಪಿಂಚಣಿ ನೀತಿ (NPS) ರದ್ದುಗೊಳಿಸಿ ಹಳೆ ಪಿಂಚಣಿ ನೀತಿ (ಒಪಿಎಸ್‌) ಜಾರಿಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರರ ಸಂಘದ ವತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಮೂಲಕ ಮುಖ್ಯ ಕಾರ್ಯದರ್ಶಿ ಅವರಿಗೆ ಮನವಿ ಸಲ್ಲಿಸಲಾಯಿತು.

ಎನ್‌ಪಿಎಸ್‌, ಯುಪಿಎಸ್‌ ಬೇಡ

ಎನ್‌ಪಿಎಸ್‌ ರದ್ದುಗೊಳಿಸುವಂತೆ ಹತ್ತು ವರ್ಷದಿಂದ ನಿರಂತರ ಹೋರಾಟ ನಡೆಸಲಾಗುತ್ತಿದೆ. ಈ ಮಧ್ಯೆ ಕೇಂದ್ರ ಸರ್ಕಾರ ಏಕೀಕೃತ ಪಿಂಚಣಿ ವ್ಯವಸ್ಥೆ (ಯುಪಿಎಸ್‌) ಜಾರಿಗೆ ತೀರ್ಮಾನಿಸಿದೆ. ಆದರೆ ಈ ವ್ಯವಸ್ಥೆ ಕೂಡ ಷೇರು ಮಾರುಕಟ್ಟೆ ಆಧಾರಿತವಾಗಿದೆ. ಇದರಿಂದ ಸಂಧ್ಯಾ ಕಾಲದಲ್ಲಿ ಸರ್ಕಾರಿ ನೌಕರರ ಬದುಕಿಗೆ ಭದ್ರತೆ ಇಲ್ಲವಾಗಲಿದೆ. ಇದೇ ಕಾರಣಕ್ಕೆ ಎನ್‌ಪಿಎಸ್‌, ಯುಪಿಎಸ್‌ ಬೇಡ, ಒಪಿಎಸ್‌ ಜಾರಿಗೊಳಿಸಿ ಎಂದು ಆಗ್ರಹಿಸಿ ಮನವಿ ಮಾಡಲಾಯಿತು.

NPS employees union Shimoga

ಜಿಲ್ಲಾಧ್ಯಕ್ಷ ರಾಘವೇಂದ್ರ.ಕೆ.ಎಸ್‌ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ರಾಜ್ಯ ಉಪಾಧ್ಯಕ್ಷ ಡಾ. ರಜನಿಕಾಂತ್‌, ರಾಜ್ಯ ಸಹ ಕಾರ್ಯದರ್ಶಿ ಚಂದ್ಯಾನಾಯ್ಕ, ಜಿಲ್ಲಾ ಕಾರ್ಯದರ್ಶಿ ಶಿವಶಂಕರ್‌, ಡಾ. ಪರಿಸರ ನಾಗರಾಜ್‌ ಸೇರಿ ಹಲವರು ಇದ್ದರು.

ಇದನ್ನೂ ಓದಿ » ಸಿದ್ದರಾಮಯ್ಯ ಬೆಂಬಲಿಸಿ ಶಿವಮೊಗ್ಗದಲ್ಲಿ ಪ್ರತಿಜ್ಞೆ ಸ್ವೀಕಾರ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 27, 2024

Leave a Comment