NEWS HIGHLIGHTS
SHIMOGA REPORT, 2 OCTOBER 2024 : ನಾಡಹಬ್ಬ ದಸರಾವನ್ನು ಶಿವಮೊಗ್ಗದಲ್ಲಿ ಈ ಬಾರಿ ಅದ್ಧೂರಿಯಿಂದ ಆಚರಿಸಲಾಗುತ್ತಿದೆ. ಇದಕ್ಕೆ ಸಿದ್ಧತೆ ಪೂರ್ಣಗೊಂಡಿದೆ. ಅ.3ರಂದು ಶಿವಮೊಗ್ಗ ದಸರಾಗೆ ಚಾಲನೆ ನೀಡಲಾಗುತ್ತಿದೆ.
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಶಾಸಕ ಎಸ್.ಎನ್.ಚನ್ನಬಸಪ್ಪ, ಸಿನಿಮಾ ನಿರ್ದೇಶಕ ಸುನಿಲ್ ಕುಮಾರ್ ದೇಸಾಯಿ ಈ ಬಾರಿ ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ನಾಳೆ ಪಾಲಿಕೆಯಿಂದ ಮೆರವಣಿಗೆ

ಅ.3ರಂದು ಬೆಳಗ್ಗೆ 9 ಗಂಟೆಗೆ ಮಹಾನಗರ ಪಾಲಿಕೆ ಆವರಣದಿಂದ ನಾಡದೇವಿ ಚಾಮುಂಡೇಶ್ವರಿಯ ಮೆರವಣಿಗೆ ಆರಂಭವಾಗಲಿದೆ ಕೋಟೆ ಶ್ರೀ ಚಂಡಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನದವರೆಗೆ ಮೆರವಣಿಗೆ ನಡೆಯಲಿದೆ. ದೇಗುಲದ ಆವರಣದಲ್ಲಿ ಸಿನಿಮಾ ನಿರ್ದೇಶಕ ಸುನಿಲ್ ಕುಮಾರ್ ದೇಸಾಯಿ ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ.
ಇದನ್ನೂ ಓದಿ » ಹೈಕೋರ್ಟ್‌ಗೆ ದಸರಾ ರಜೆ, ಎಷ್ಟು ದಿನ? ಯಾವಾಗ ಶುರುವಾಗುತ್ತೆ ಕಲಾಪ?