ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ದಂಡ, ಸಂಸದ ರಾಘವೇಂದ್ರ ಹೇಳಿದ್ದೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
SHIMOGA NEWS, 3 OCTOBER 2024 : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Airport) ವಿಮಾನಯಾ ನಿರ್ದೇಶನಾಲಯ 20 ಲಕ್ಷ ರೂ. ದಂಡ ವಿಧಿಸಿದೆ. ಈ ಸಂಬಂಧ ಸಂಸದ ಬಿ.ವೈ.ರಾಘವೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಸಂಸದ ರಾಘವೇಂದ್ರ ಹೇಳಿದ್ದೇನು?

ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟದ ವಿಷಯದಲ್ಲಿ ತಪ್ಪಾಗಿದೆ. 18 ಜನ ಅಗ್ನಿಶಾಮಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರೂ ಪರಿಶೀಲನೆ ವೇಳೆ ಎಂಟು ಜನರನ್ನು ಬೇರೆ ವಿಮಾನ ನಿಲ್ದಾಣಕ್ಕೆ ನಿಯೋಜಿಸಲಾಗಿದೆ. ಈ ರೀತಿ ಆಗಿರುವುದಕ್ಕೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ರಾಘವೇಂದ್ರ ತಿಳಿಸಿದರು.

BY-Raghavendra-About-Shimoga-Airport

ಡಿಜಿಸಿಎ ನಿಯಮಾವಳಿವಂತೆ ಎಲ್ಲವನ್ನೂ ಜಾರಿಗೆ ತರಲಾಗುವುದು. ಡಿಜಿಸಿಎ ನಿಯಮಾವಳಿಯನ್ನು ರಾಜ್ಯ ಸರ್ಕಾರ ಪಾಲಿಸಬೇಕಿದೆ. ಅಧಿಕಾರಿಗಳ ಅನುಭವ ಕೊರತೆಯಿಂದ ದಂಡ ವಿಧಿಸಲಾಗಿದೆ. ವಿಮಾನ ನಿಲ್ದಾಣ ಉನ್ನತೀಕರಿಸಲಾಗುತ್ತಿದೆ. ಜನರ ರಕ್ಷಣೆಗಾಗಿ ವಿಮಾನ ನಿಲ್ದಾಣದ ನ್ಯೂನತೆಯನ್ನು ಸರ್ಕಾರ ಸರಿಪಡಿಸಬೇಕಿದೆ ಎಂದು ಹೇಳಿದರು.

ಇದನ್ನೂ ಓದಿ » ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 20 ಲಕ್ಷ ರೂ. ದಂಡ, ಕಾರಣವೇನು?

Leave a Comment