ಶಿವಮೊಗ್ಗದಲ್ಲಿ ಇವತ್ತು ಹೇಗಿರುತ್ತೆ ವಾತಾವರಣ? ಮಳೆಯಾಗುತ್ತಾ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

WEATHER REPORT, 4 OCTOBER 2024 : ಬಿಸಿಲಿನ ಝಳದಿಂದ ಹೈರಾಣಾಗಿದ್ದ ಶಿವಮೊಗ್ಗದ ಜನರಿಗೆ ಗುರುವಾರದ ಮಳೆ ತುಸು ತಂಪೆನಿಸಿದೆ. ಇವತ್ತು ಕೂಡ ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

» ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 30 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಇವತ್ತು ಬಿಸಿಲು ಇರಲಿದೆ. ಮೋಡ ಕವಿದ ವಾತಾವರಣವು ಕಾಣಿಸಲಿದೆ. ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಂಭವವು ಇದೆ. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

» ತೀರ್ಥಹಳ್ಳಿ, ಹೊಸನಗರ ತಾಲೂಕಿನಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಸಾಧಾರಣದಿಂದ ಜೋರು ಮಳೆಯಾಗುವ ಸಂಭವವಿದೆ.

WEATHER-REPORT-SHIMOGA-

» ಸಾಗರ ತಾಲೂಕಿನಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಮಧ್ಯಾಹ್ನದ ಹೊತ್ತಿಗೆ ಮೋಡ ಕವಿದ ವಾತಾವರಣ, ಮಳೆಯಾಗಲಿದೆ.

» ಸೊರಬ ಮತ್ತು ಶಿಕಾರಿಪುರ ತಾಲೂಕಿನಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ ಮತ್ತು ಸಂಜೆ ಹೊತ್ತಿಗೆ ಮಳೆಯಾಗುವ ಸಾಧ್ಯತೆ ಇದೆ.     

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆ, ಎಲ್ಲೆಲ್ಲಿ ಆಗ್ತಿದೆ ವರ್ಷಧಾರೆ?

Leave a Comment