ಟ್ರೆಕ್ಕಿಂಗ್‌ ತೆರಳುವವರಿಗೆ ಇನ್ಮುಂದೆ ಟಿಕೆಟ್‌ ಕಡ್ಡಾಯ, ವೆಬ್‌ಸೈಟ್‌ ಆರಂಭ

STATE NEWS, 4 OCTOBER 2024 : ಚಾರಣಕ್ಕೆ (Trekking) ಹೋಗುವವರಿಗೆ ಅರಣ್ಯ ಇಲಾಖೆ ಆನ್‌ಲೈನ್‌ನಲ್ಲೇ ಟಿಕೆಟ್ ಖರೀದಿಸಲು ಅವಕಾಶ ಕಲ್ಪಿಸಿದೆ. ಇದಕ್ಕಾಗಿ ವೆಬ್‌ಸೈಟ್ ರೂಪಿಸಿದೆ. ಅರಣ್ಯ ಸಚಿವ ಈಶ್ವರ ಖಂಡ್ರೆ ವೆಬ್‌ಸೈಟ್‌ ಉದ್ಘಾಟಿಸಿದರು.

ಕನಿಷ್ಠ 300 ಚಾರಣಿಗರಿಗೆ ಅವಕಾಶ

#f1f1f1 POINT-1-jpg.webp

ಚಾರಣಕ್ಕೆ ಹೋಗುವವರು https://aranyavihaara.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ರಾಜ್ಯದ ಎಲ್ಲ ಚಾರಣ ಪಥಗಳಲ್ಲಿ ದಿನವೊಂದಕ್ಕೆ ಗರಿಷ್ಠ 300 ಚಾರಣಿಗರಿಗೆ ಅವಕಾಶ ಕಲ್ಪಿಸಲಾಗುತ್ತದೆ.


#f1f1f1 POINT-2-jpg.webp

ಈ ವೆಬ್‌ಸೈಟ್‌ನಲ್ಲಿ ರಾಜ್ಯದ ಎಲ್ಲ ಚಾರಣ ಪಥಗಳ ಟಿಕೆಟ್ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ. ಒಂದು ಚಾರಣ ಪಥಕ್ಕೆ ನಿರ್ದಿಷ್ಟ ದಿನ ಟಿಕೆಟ್ ಸಿಗದವರು ಬೇರೆ ಚಾರಣಪಥವನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ.


#f1f1f1 POINT-3-jpg.webp

ಚಾರಣ ಪಥಗಳ ಟಿಕೆಟ್‌ಗಳನ್ನು ಕೆಲವು ಖಾಸಗಿ ಸಂಸ್ಥೆಗಳು ಖರೀದಿ ಮಾಡುತ್ತಿವೆ ಎಂಬ ದೂರಿನ ಹಿನ್ನೆಲೆ ಅಕ್ರಮ ತಡೆಗೆ ವ್ಯವಸ್ಥೆ ಮಾಡಲಾಗಿದೆ. ಸರ್ಕಾರದ ಭಾವಚಿತ್ರ ಸಹಿತ ಗುರುತಿನ ಚೀಟಿ ಅಪ್ ಲೋಡ್ ಮಾಡಿ ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆ ಮಾಡಲಾಗಿದೆ. ಪ್ರತಿ 10-20 ಚಾರಣಿಗರಿಗೆ ಒಬ್ಬರಂತೆ ಗೈಡ್‌ಗಳನ್ನೂ ನಿಯೋಜಿಸಲಾಗುತ್ತದೆ. ಒಂದು ಫೋನ್ ನಂಬರ್‌ನಲ್ಲಿ 10 ಟಿಕೆಟ್ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ.

Kalleshwara-Enterprises.webp

#f1f1f1 POINT 4

ಪ್ರಸ್ತುತ ಕುಮಾರ ಪರ್ವತದಿಂದ ಸುಬ್ರಹ್ಮಣ್ಯ, ಬೀದಹಳ್ಳಿಯಿಂದ ಕುಮಾರ ಪರ್ವತ, ಬೀದಹಳ್ಳಿ -ಕುಮಾರ ಪರ್ವತ ಸುಬ್ರಹ್ಮಣ್ಯ, ಚಾಮರಾಜನಗರ – ನಾಗಮಲೈ, ತಲಕಾವೇರಿಯಿಂದ -ನಿಶಾನೆಮೊಟ್ಟೆ ಚಾರಣ ತಾಣಗಳಿಗೆ ಮಾತ್ರ ಟಿಕೆಟ್ ಕಾಯ್ದಿರಿಸಲು ಅವಕಾಶವಿದೆ. ತಿಂಗಳ ಅಂತ್ಯದೊಳಗೆ 40 ಚಾರಣ ಪಥಗಳನ್ನು ಜಾಲತಾಣದಲ್ಲಿ ಸೇರಿಸಲಾಗುವುದು.


#f1f1f1 point 5

ವನ್ಯಜೀವಿ ಮತ್ತು ಬೋಟ್ ಸಫಾರಿಗೂ ಟಿಕೆಟ್ ಕಾಯ್ದಿರಿಸಲು ವೆಬ್‌ಸೈಟ್‌ನಲ್ಲಿ ಅವಕಾಶವಿದೆ. ಪ್ಲಾಸ್ಟಿಕ್ ಬಾಟಲಿ, ಕ್ಯಾರಿಬ್ಯಾಗ್, ತಿಂಡಿ ಪೊಟ್ಟಣ ನಿಷೇಧಿಸಲಾಗುವುದು. ಸಿಕ್ಕಿ ಬಿದ್ದರೆ ದಂಡ ವಿಧಿಸಲಾಗುತ್ತದೆ.

ಇದನ್ನೂ ಓದಿ » ಶಿವಮೊಗ್ಗ ದಸರಾ ವೇದಿಕೆಯಲ್ಲಿ ನಟಿ ಉಮಾಶ್ರೀ ಗರಂ, ಕಾರಣವೇನು?

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment