ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 8 OCTOBER 2024 : ಶಿವಮೊಗ್ಗ ದಸರಾ ಹಿನ್ನೆಲೆ ಅ.12ರಂದು ನಗರದಲ್ಲಿ ಜಂಬೂ ಸವಾರಿ ನಡೆಯಲಿದೆ. ಈ ಹಿನ್ನಲೆ ಅಂಬಾರಿ ಮೆರವಣಿಗೆ ಸಾಗುವ ಮಾರ್ಗದುದ್ದಕ್ಕು ಕೇಬಲ್ ವಯರ್ಗಳನ್ನು (Cable Wire) ತೆರವು ಮಾಡುವಂತೆ ಮಹಾನಗರ ಪಾಲಿಕೆ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂಬಾರಿ ಮೆರವಣಿಗೆಯು ಕೋಟೆ ರಸ್ತೆಯಿಂದ ರಾಮಣ್ಣ ಶ್ರೇಷ್ಠಿ ಪಾರ್ಕ್, ಶಿವಪ್ಪ ನಾಯಕ ವೃತ್ತ , ಅಮೀರ್ ಅಹ್ಮದ್ ವೃತ್ತ, ಗೋಪಿ ಸರ್ಕಲ್, ಜೈಲ್ ಸರ್ಕಲ್, ಲಕ್ಷ್ಮೀ ಟಾಕೀಸ್ ಸರ್ಕಲ್, ಫ್ರೀಡಂ ಪಾರ್ಕ್ ಮಾರ್ಗದಲ್ಲಿ ದಸರಾ ಮೆರವಣಿಗೆ ನಡೆಯಲಿದೆ. ಅಂಬಾರಿ ಸಂಚರಿಸುವ ಈ ರಸ್ತೆಗಳಲ್ಲಿ ನೆಲದಿಂದ ಮೇಲೆ 20 ಅಡಿಯೊಳಗೆ ಹಾದು ಹೋಗಿರುವ ಎಲ್ಲಾ ಕೇಬಲ್, ವಯರ್, ತಂತಿಗಳನ್ನು ಕೂಡಲೇ ತೆರವುಗೊಳಿಸಬೇಕು. ಇಲ್ಲವಾದಲ್ಲಿ ಪಾಲಿಕೆಯಿಂದ ಕ್ರಮ ಕೈಗೊಳ್ಳಲಾಗುತ್ತದೆ ಎಂದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ » ರಾತ್ರೋರಾತ್ರಿ ಶಿವಮೊಗ್ಗದಲ್ಲಿ ಆರು ಕತ್ತೆಗಳ ಕಳ್ಳತನ
LATEST NEWS
- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

- ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





