ಶಿವಮೊಗ್ಗದಲ್ಲಿ ತುಂಗಾ ನದಿ ಮಧ್ಯೆ ಬಂಡೆ ಮೇಲೆ ಸಿಲುಕಿದ ವ್ಯಕ್ತಿ

SHIMOGA NEWS, 9 OCTOBER 2024 : ತುಂಗಾ ನದಿ (RIVER) ಮಧ್ಯೆ ಬಂಡೆ ಮೇಲೆ ಸಿಲುಕಿದ್ದ ವ್ಯಕ್ತಿಯೊಬ್ಬನನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಶಿವಮೊಗ್ಗದ ಹಳೆ ಸೇತುವೆ ಪಕ್ಕದಲ್ಲಿರುವ ಬಂಡೆ ಮೇಲೆ ವ್ಯಕ್ತಿ ಸಿಲುಕಿದ್ದ.➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಗೋಪಾಲ್‌ (35) ಎಂಬಾತ ತುಂಗಾ ನದಿ ಮಧ್ಯೆ ಬಂಡೆ ಮೇಲೆ ಕುಳಿತಿದ್ದ. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.

ರಾತ್ರಿ ಅಲ್ಲೇ ಮಲಗಿದ್ದ

ಗೋಪಾಲ್‌ ಕಳೆದ ರಾತ್ರಿ ತುಂಗಾ ನದಿ ನಡುವೆ ಇರುವ ಬಂಡೆ ಮೇಲೆ ಹೋಗಿ ಮಲಗಿದ್ದ ಎಂದು ಹೇಳಲಾಗುತ್ತಿದೆ. ಬೆಳಗ್ಗೆ ಎಚ್ಚರವಾದಾಗ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿ ದಡಕ್ಕೆ ಬರಲಾಗದೆ ಆತಂಕಕ್ಕೀಡಾಗಿದ್ದ. ಇದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು.

rescue-operation-at-tunga-river-in-shimoga

ಬೆಳಗ್ಗೆ 6.30ರ ಹೊತ್ತಿಗೆ ಬೋಟ್‌ ಮೂಲಕ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಗೋಪಾಲ್‌ನನ್ನು ರಕ್ಷಿಸಿದ್ದಾರೆ. ಅಗ್ನಿಶಾಮಕ ದಳದ ಎಫ್‌ಎಸ್‌ಒ ನರೇಂದ್ರ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ » ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಲಾಂಗು, ಚಾಕು ಪ್ರದರ್ಶನ

Leave a Comment