ಆಯನೂರು | ಶಾರ್ಟ್‌ ಸರ್ಕ್ಯೂಟ್‌ಗೆ ಲಕ್ಷ ಲಕ್ಷದ ವಸ್ತುಗಳು ಆಹುತಿ

AYANURU NEWS, 9 OCTOBER 2024 : ಶಾರ್ಟ್ ಸರ್ಕ್ಯೂಟ್‌ನಿಂದ ಹಾರ್ಡ್‌ವೇರ್ ಅಂಗಡಿಗೆ (shop) ಬೆಂಕಿ ತಗುಲಿ ನಗದು ಹಾಗೂ ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಗ್ರಿಗಳು ಆಹುತಿಯಾದ ಘಟನೆ ಆಯನೂರಿನಲ್ಲಿ ನಡೆದಿದೆ. ➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಆರ್.ವಿ.ಟ್ರೇಡರ್ಸ್ ಕಬ್ಬಿಣ ಹಾಗೂ ಸಿಮೆಂಟ್ ಅಂಗಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸಾಮಗ್ರಿಗಳು ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ಶಾರ್ಟ್‌ ಸರ್ಕಿಟ್‌ನಿಂದ ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಬೆಂಕಿ ಹೊತ್ತಿದ ಕೆಲವೇ ನಿಮಿಷದಲ್ಲಿ ವ್ಯಾಪಕವಾಗಿ ಹರಡಿದೆ. ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ. ಮೆಸ್ಕಾಂ ಸಿಬ್ಬಂದಿ, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ತುಂಗಾ ನದಿ ಮಧ್ಯೆ ಬಂಡೆ ಮೇಲೆ ಸಿಲುಕಿದ ವ್ಯಕ್ತಿ

Leave a Comment