ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 9 OCTOBER 2024 : ಕೊಂಡಜ್ಜಿ ಹಳ್ಳ ದಾಟುವಾಗ ಬೈಕ್ ಸಹಿತ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿಯ ಶೋಧ ಕಾರ್ಯ ಸ್ಥಗಿತಗೊಳಿಸಲಾಗಿದೆ. ಇನ್ನೊಂದೆಡೆ ವಿಷಯ ತಿಳಿದು ಸಂಸದ ಬಿ.ವೈ.ರಾಘವೇಂದ್ರ ಸ್ಥಳಕ್ಕೆ ಭೇಟಿ (Visit) ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮಧ್ಯಾಹ್ನದಿಂದ ನಿರಂತರ ಕಾರ್ಯಾಚರಣೆ
ನ್ಯಾಮತಿಯ ಚಿನ್ನಿಕಟ್ಟೆಯ ಇಕ್ಬಾಲ್ ಕೊಂಡಜ್ಜಿ ಹಳ್ಳ ದಾಟುವಾಗ ಬೈಕ್ ಸಹಿತ ಕೊಚ್ಚಿ ಹೋಗಿದ್ದಾರೆ. ಅವರಿಗಾಗಿ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದರು. ರಬ್ಬರ್ ಬೋಟ್ ಬಳಸಿ ಹಳ್ಳದ ಎರಡು ಬದಿಯಲ್ಲಿ ಶೋಧಿಸಿದರು. ಅದರೆ ಇಕ್ಬಾಲ್ ಮತ್ತು ಅವರ ಬೈಕ್ ಪತ್ತೆಯಾಗಿಲ್ಲ.
ಶೋಧ ಕಾರ್ಯಾಚರಣೆ ಸ್ಥಗಿತ
ಮಧ್ಯಾಹ್ನದಿಂದ ನಿರಂತರ ಶೋಧ ಕಾರ್ಯಾಚರಣೆ ನಡೆಯಿತು. ಸಂಜೆ ವೇಳೆಗೆ ಬೆಳಕಿನ ಕೊರತೆ ಹಿನ್ನೆಲೆ ಶೋಧ ಕಾರ್ಯಾಚರಣೆ ಸ್ಥಗಿತಗೊಳಿಸಲಾಯಿತು. ನಾಳೆ ಬೆಳಗ್ಗೆ ಪುನಃ ಕಾರ್ಯಾಚರಣೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂಸದ ರಾಘವೇಂದ್ರ ಭೇಟಿ
ಕೊಂಡಜ್ಜಿ ಹಳ್ಳದಲ್ಲಿ ವ್ಯಕ್ತಿ ಕೊಚ್ಚಿ ಹೋದ ವಿಷಯ ತಿಳಿಯುತ್ತಿದ್ದಂತೆ ಸಂಸದ ಬಿ.ವೈ.ರಾಘವೇಂದ್ರ ಸ್ಥಳಕ್ಕೆ ಭೇಟಿ ನೀಡಿದ್ದರು. ಇಕ್ಬಾಲ್ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಇನ್ನು, ಅಧಿಕಾರಿಗಳ ಜೊತೆಗೆ ಮಾತನಾಡಿ ಕಾರ್ಯಾಚರಣೆ ಕುರಿತು ಮಾಹಿತಿ ಪಡೆದರು.
ಇದೇ ವೇಳೆ ಹಿರಿಯ ಅಧಿಕಾರಿಗಳಿಗೆ ಕರೆ ಮಾಡಿದ ಸಂಸದ ರಾಘವೇಂದ್ರ, ಕೊಂಡೊಜ್ಜಿ ಹಳ್ಳ ದಾಟಿ ಹೋಗುವ ರಸ್ತೆಯಲ್ಲಿ ಸೂಕ್ತ ವ್ಯವಸ್ಥೆ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುವ ಸಾಧ್ಯತೆ ಇದೆ. ಕೆರೆ, ಕಟ್ಟೆ ತುಂಬಿ ಅನಾಹುತ ಸೃಷ್ಟಿಯಾಗಬಹುದು. ಈ ಕುರಿತೂ ಎಚ್ಚರ ವಹಿಸಬೇಕು ಎಂದು ಸೂಚನೆ ನೀಡಿದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಮ್ಯೂಸಿಕಲ್ ನೈಟ್‌ಗೆ ಮಳೆ ಅಡ್ಡಿ, ಜನ ಸಿಡಿಮಿಡಿ