NEWS HIGHLIGHTS
WEATHER NEWS, 12 OCTOBER 2024 : ಶಿವಮೊಗ್ಗ ಜಿಲ್ಲೆಯಲ್ಲಿ ಶುಕ್ರವಾರ ಭಾರಿ ಮಳೆಯಾಗಿದೆ. ಇದರಿಂದ ತಾಪಮಾನ ತುಸು ಇಳಿಕೆಯಾಗಿದೆ. ಇವತ್ತೂ ಜಿಲ್ಲೆಯಲ್ಲಿ ಗುಡಗು ಸಹಿತ, ಸಾಧಾರಣದಿಂದ ಭಾರಿ ಮಳೆಯ ಸಾಧ್ಯತೆ ಇದೆ ಎಂದು ಹಾವಾಮಾನ ಇಲಾಖೆ ಎಚ್ಚರಿಸಿದೆ. ಅಲ್ಲದೆ ಯಲ್ಲೋ ಅಲರ್ಟ್ ಕೂಡ ಘೋಷಸಲಾಗಿದೆ.
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.ಎಲ್ಲೆಲ್ಲಿ ಹೇಗಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬೆಳಗ್ಗೆ 9 ಗಂಟೆಯಿಂದ ರಾತ್ರಿ 11 ಗಂಟೆವರೆಗೆ ಮಳೆ ಅಲರ್ಟ್ ಪ್ರಕಟಿಸಲಾಗಿದೆ.
ತೀರ್ಥಹಳ್ಳಿಯಲ್ಲಿ ತಾಪಮಾನ ಗರಿಷ್ಠ 29 ಡಿಗ್ರಿ , ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ಇದೆ. ಮಧ್ಯಾಹ್ನದ ಬಳಿಕ ಸಾಧಾರಣದಿಂದ ಜೋರು ಮಳೆಯ ಮುನ್ಸೂಚನೆ ಇದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 32 ಡಿಗ್ರಿ , ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮಧ್ಯಾಹ್ನದ ನಂತರ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ » ಭದ್ರಾವತಿಯ ಯರೇಹಳ್ಳಿ ಭಾಗದಲ್ಲಿ ಅತಿ ಹೆಚ್ಚು ಮಳೆ