ಶಿವಮೊಗ್ಗ ಜಂಬೂ ಸವಾರಿಗೆ ಕ್ಷಣಗಣನೆ, ಆನೆಗಳು ರೆಡಿ

DASARA NEWS, 12 OCTOBER 2024 : ಶಿವಮೊಗ್ಗ ದಸರಾದ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಸಕ್ರೆಬೈಲು ಬಿಡಾರದ ಸಾಗರ ಆನೆ (Elephant) ನೇತೃತ್ವದ ಗಜಪಡೆ ಅಂಬಾರಿ ಹೊತ್ತು ಮೆರವಣಿಗೆಯಲ್ಲಿ ಭಾಗವಹಿಸಲಿದೆ.

ಜಂಬೂ ಸವಾರಿ ಹಿನ್ನೆಲೆ ಸಕ್ರೆಬೈಲು ಬಿಡಾರದ ಸಾಗರ, ಬಹದ್ದೂರ್‌, ಬಾಲಣ್ಣ ಆನೆಗಳಿಗೆ ಅಲಂಕಾರ ಆರಂಭವಾಗಿದೆ. ವಾಸವಿ ಶಾಲೆ ಆವರಣದಲ್ಲಿ ಮೂರು ಆನೆಗಳಿಗೆ ಕಲಾವಿದರು ವಿವಿಧ ಬಣ್ಣಗಳಿಂದ ಅಲಂಕಾರ ಮಾಡಿದ್ದಾರೆ. ಇನ್ನು, ಜಂಬೂ ಸವಾರಿಯಲ್ಲಿ ಭಾಗವಹಿಸಲಿರುವ ಕಲಾ ತಂಡಗಳು ಕೂಡ ಸಿದ್ಧತೆ ಮಾಡಿಕೊಂಡಿವೆ.

Elephant-All-set-for-Dasara-in-Shimoga

ಇಂದು ಮಧ್ಯಾಹ್ನ 2.30ಕ್ಕೆ ಶಿವಪ್ಪನಾಯಕ ಅರಮನೆ ಮುಂಭಾಗ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಾಗುತ್ತದೆ. ಆ ನಂತರ ಸುಮಾರು 450 ಕೆ.ಜಿ. ತೂಕದ ಅಂಬಾರಿ ಹೊತ್ತು ಸಾಗರ ಆನೆ ಮೆರವಣಿಗೆಯಲ್ಲಿ ಭಾಗವಹಿಸಲಿದೆ.

ಇದನ್ನೂ ಓದಿ » ಭದ್ರಾವತಿಯಲ್ಲಿ ಮುಂದುವರೆದ ಮಳೆ, ಕಾಂಪೌಂಡ್‌ ಕುಸಿತ, ಮನೆಗಳು ಜಲಾವೃತ

Kalleshwara-Enterprises.webp
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment