ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
DASARA NEWS, 12 OCTOBER 2024 : ಶಿವಮೊಗ್ಗ ದಸರಾದ ಜಂಬೂ ಸವಾರಿಗೆ ಚಾಲನೆ ಸಿಕ್ಕಿದೆ. ಸಕ್ರೆಬೈಲು ಬಿಡಾರದ ಸಾಗರ ಆನೆ ಅಂಬಾರಿ (ambari) ಹೊತ್ತು ರಾಜ ಗಾಂಭೀರ್ಯದಲ್ಲಿ ಹೆಜ್ಜೆ ಹಾಕುತ್ತಿದೆ.
ನಂದಿ ಧ್ವಜಕ್ಕೆ ಪೂಜೆ
ಶಿವಪ್ಪನಾಯಕ ಅರಮನೆ ಮುಂಭಾಗ ಸಚಿವ ಮಧು ಬಂಗಾರಪ್ಪ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು. ಈ ಸಂದರ್ಭ ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಅರುಣ್, ಬಲ್ಕಿಷ್ ಬಾನು, ಡಾ. ಧನಂಜಯ ಸರ್ಜಿ ಸೇರಿದಂತೆ ಹಲವರು ಇದ್ದರು.
ನಾಡ ದೇವಿಗೆ ಪುಷ್ಪಾರ್ಚನೆ
ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಸಚಿವ ಮಧು ಬಂಗಾರಪ್ಪ, ಅನಿತಾ ಮಧು ಬಂಗಾರಪ್ಪ , ಶಾಸಕರು, ಸೂಡ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಸೇರಿದಂತೆ ಹಲವರು ಪುಷ್ಪಾರ್ಚನೆ ಮಾಡಿದರು. ಬಳಿಕ ಜಂಬೂ ಸವಾರಿ ಮೆರವಣಿಗೆ ಆರಂಭವಾಯಿತು.
ಇದನ್ನೂ ಓದಿ » ಶಿವಮೊಗ್ಗ ದಸರಾ, ಎಲ್ಲರಿಗು ಗೊತ್ತಿರಬೇಕಾದ 5 ವಿಷಯಗಳಿವು
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422