ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
DASARA NEWS, 12 OCTOBER 2024 : ಶಿವಮೊಗ್ಗ ದಸರಾ ಮೆರವಣಿಗೆ (Dasara) ಆರಂಭವಾಗಿದೆ. ನಾಡ ದೇವಿ ಚಾಮುಂಡೇಶ್ವರಿ ಮೂರ್ತಿ ಇರುವ ಅಂಬಾರಿ ಹೊತ್ತು ಸಾಗರ ಆನೆ ಗಂಭೀರವಾಗಿ ಹೆಜ್ಜೆ ಹಾಕುತ್ತಿದ್ದಾನೆ. ಇದರ ಹಿಂದಯೇ ಬಾಲಣ್ಣ ಮತ್ತು ಬಹದ್ದೂರ್ ಆನೆಗಳು ಭಾಗವಹಿಸಿವೆ. ಇದರ ಜೊತೆಗೆ ವಿವಿಧ ಕಲಾ ತಂಡಗಳು ಮೆರವಣಿಗೆಯ ಮೆರಗು ಹೆಚ್ಚಿಸಿವೆ.
ಶಿವಪ್ಪನಾಯಕ ಅರಮನೆ ಮುಂಭಾಗ ಮೆರವಣಿಗೆಗೆ ಚಾಲನೆ ನೀಡಲಾಯಿತು. ಇಲ್ಲಿಂದಲೇ ವಿವಿಧ ಕಲಾ ತಂಡಗಳು ನೃತ್ಯ ಮತ್ತು ಕಸರತ್ತು ಪ್ರದರ್ಶಿಸುತ್ತ ಮೆರವಣಿಗೆಯಲ್ಲಿ ಭಾಗವಹಿಸಿವೆ.
ಯಾವೆಲ್ಲ ಕಲಾ ತಂಡಗಳಿವೆ?
ಮೆರವಣಿಗೆಯಲ್ಲಿ ಮಂಗಳ ವಾದ್ಯ, ಸಮಾಳ ವಾದ್ಯ, ನಂದಿ ಧ್ವಜ ಕುಣಿತ, ವೀರಗಾಸೆ, ಚಂಡೆ ಮದ್ದಳೆ, ಗೊಂಬೆಗಳ ಕುಣಿತ, ರಾಜ್ಯ ಪ್ರಶಸ್ತಿ ವಿಜೇತ ಶೆಟ್ಟಿ ಗೊಂಬೆ ಬಳಗದಿಂದ ಕೀಲು ಕುದುರೆ, ದೊಡ್ಡ ಗೊಂಬೆಗಳ ಕುಣಿತ, ಹುಲಿ ವೇಷ ಕುಣಿತ, ರೋಡ್ ಆರ್ಕೇಸ್ಟ್ರಾ ಸೇರಿದಂತೆ ವಿವಿಧ ಕಲಾ ತಂಡಗಳು ಮೆರವಣಿಗೆಯಲ್ಲಿವೆ.
ದೇವಾನುದೇವತೆಗಳ ಮೆರವಣಿಗೆ
ಅಂಬಾರಿ ಹೊತ್ತ ಆನೆಗಳ ಜೊತೆಗೆ ನಗರದ ವಿವಿಧೆಡೆ ದೇವಾನುದೇವತೆಗಳು ಮೆರವಣಿಗೆಯಲ್ಲಿ ಭಾಗವಹಿಸಿವೆ. ವಿವಿದ ದೇಗುಲಗಳಿಂದ ಅಗಮಿಸಿರುವ ಉತ್ಸವ ಮೂರ್ತಿಗಳು ಮೆರವಣಿಗೆಯಲ್ಲಿವೆ. ನೂರಕ್ಕೂ ಹೆಚ್ಚು ದೇವರುಗಳು ಮೆರವಣಿಗೆಯಲ್ಲಿವೆ.
ಮೆರವಣಿಗೆಯಲ್ಲಿ ತಹಶೀಲ್ದಾರ್ ನಡಿಗೆ
ಫ್ರೀಡಂ ಪಾರ್ಕ್‌ನಲ್ಲಿ ಬನ್ನಿ ಮುಡಿಯುವ ಕಾರ್ಯಕ್ರಮ ನಡೆಯಲಿದೆ. ತಹಶೀಲ್ದಾರ್ ಗಿರೀಶ್ ಅವರು ಅಂಬು ಕಡಿದು, ಬನ್ನಿ ಮುಡಿಯುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆ ಕೋಟೆ ದೇವಸ್ಥಾನದಲ್ಲಿ ತಹಶೀಲ್ದಾರ್ ಗಿರೀಶ್ ಅವರು ವಿಶೇಷ ಪೂಜೆ ಸಲ್ಲಿಸಿದರು. ಮೈಸೂರು ಪೇಟ, ಕೋಟು ತೊಟ್ಟು ಮೆರವಣಿಗೆಯಲ್ಲಿ ನಡೆದು ಸಾಗಿದರು.
ಜನರು ರಸ್ತೆಯ ಇಕ್ಕೆಲಗಳಲ್ಲಿ ನಿಂತು ಅಂಬಾರಿ ಮೆರವಣಿಗೆಯನ್ನು ಕಣ್ತುಂಬಿಕೊಂಡರು. ಮೆರವಣಿಗೆ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ ದಸರಾ ಮೆರವಣಿಗೆಗೆ ಅದ್ಧೂರಿ ಚಾಲನೆ, ಅಂಬಾರಿ ಹೊತ್ತು ಸಾಗರನ ರಾಜಗಾಂಭೀರ್ಯ ನಡೆ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422