ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 13 OCTOBER 2024 : ಸಿಗಂದೂರು ಸೇತುವೆ ಕಾಮಗಾರಿಯ ಫೋಟೊ ಒಂದನ್ನು ಸಂಸದ ಬಿ.ವೈ.ರಾಘವೇಂದ್ರ ತಮ್ಮ ಸಾಮಾಜಿಕ ಜಲತಾಣದಲ್ಲಿ ಷೇರ್ ಮಾಡಿದ್ದಾರೆ. ಇದು ವೈರಲ್ (Viral) ಆಗಿದ್ದು ವಾಟ್ಸಪ್ ಸ್ಟೇಟಸ್ ಸೇರಿದಂತೆ ಹಲವರ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ರಾರಾಜಿಸುತ್ತಿದೆ.
ಸಂಜೆ ಹೊತ್ತಲ್ಲಿ ಸೇತುವೆ ಕಾಮಗಾರಿಯ ಫೋಟೊ ಕ್ಲಿಕ್ಕಿಸಲಾಗಿದೆ. ಎರಡು ಪಿಲ್ಲರ್‌ಗಳ ಮೇಲೆ ಸೇತುವೆ, ಅದಕ್ಕೆ ಹಾಕಿರುವ ರೋಪ್‌ಗಳು ಕಾಣಿಸುತ್ತವೆ. ಕಾಮಗಾರಿ ಪೂರ್ಣಗೊಂಡ ಬಳಿಕ ಸೇತುವೆ ಯಾವ ರೀತಿ ಕಾಣಲಿದೆ ಎಂಬುದು ಈ ಫೋಟೊದಲ್ಲಿ ಕಾಣಿಸುತ್ತಿದೆ.
ಕಳೆದ ವಾರ ಕಾಮಗಾರಿ ಪರಿಶೀಲನೆ

2.44 ಕಿ.ಮೀ ಉದ್ದದ ಸಿಗಂದೂರು ಸೇತುವೆ ಕಾಮಗಾರಿಯನ್ನು ಸಂಸದ ಬಿ.ವೈ.ರಾಘವೇಂದ್ರ ಕಳೆದ ವಾರ ಪರಿಶೀಲನೆ ನಡೆಸಿದ್ದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡ ಈ ಸಂದರ್ಭ ಉಪಸ್ಥಿತರಿದ್ದರು. 2025ರ ಏಪ್ರಿಲ್ ತಿಂಗಳಲ್ಲಿ ಸೇತುವೆ ಉದ್ಘಾಟನೆ ಆಗಲಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದ್ದರು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಆಹ್ವಾನಿಸಲಾಗುತ್ತದೆ ಎಂದು ತಿಳಿಸಿದ್ದರು.
ಇದನ್ನೂ ಓದಿ » ಶಿವಮೊಗ್ಗ ದಸರಾ ಮೆರವಣಿಗೆಗೆ ಅದ್ಧೂರಿ ಚಾಲನೆ, ಅಂಬಾರಿ ಹೊತ್ತು ಸಾಗರನ ರಾಜಗಾಂಭೀರ್ಯ ನಡೆ
LATEST NEWS
- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು





