ಸಿಗಂದೂರಿಗೆ ತೆರಳುತ್ತಿದ್ದ ಕಾರು ಅಪಘಾತ, ಬೆಂಗಳೂರಿನ ಯುವಕ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 13 OCTOBER 2024 : ಚಾಲಕನ ನಿಯಂತ್ರಣ ತಪ್ಪಿದ ಕಾರು (Car) ಗದ್ದೆಗೆ ಪಲ್ಟಿಯಾಗಿ ಓರ್ವ ಯುವಕ ಸಾವನ್ನಪ್ಪಿದ್ದಾನೆ. ನಾಲ್ವರು ಗಾಯಗೊಂಡಿದ್ದಾರೆ. ಶಿವಮೊಗ್ಗ ತಾಲೂಕು ಕುಂಸಿ ಸಮೀಪದ ಕೆರೆಕೋಡಿ ಬಳಿ ಘಟನೆ ಸಂಭವಿಸಿದೆ.

ಬೆಂಗಳೂರು ನೆಲಮಂಗಲದ ಚಂದನ್‌ ಮೃತ ಯುವಕ. ಕೊಡುಗು ಮೂಲದ ನಂದನ್‌, ಕೋಲಾರದ ಕೋದಂಡ, ಹಾಸನದ ಭರತ್‌, ಮಂಡ್ಯ ಜಿಲ್ಲೆಯ ಯೋಗೇಶ್‌ ಎಂಬುವವರು ಗಾಯಗೊಂಡಿದ್ದಾರೆ. ಐವರು ಬೆಂಗಳೂರಿನಲ್ಲಿ ನೆಲೆಸಿದ್ದರು.

ಬೆಂಗಳೂರಿನಿಂದ ಸಿಗಂದೂರಿಗೆ ಹೊರಟಿದ್ದರು

ರಜೆ ಇದ್ದಿದ್ದರಿಂದ ಐವರು ಯುವಕರು ಬೆಂಗಳೂರಿನಿಂದ ಸಿಗಂದೂರಿಗೆ ತೆರಳುತ್ತಿದ್ದರು. ಈ ಸಂದರ್ಭ ಕುಂಸಿಯ ಕೆರೆಕೋಡಿ ಬಳಿ ಚಂದನ್‌ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಜಮೀನಿಗೆ ಉರುಳಿದೆ. ತಲೆಗೆ ಪೆಟ್ಟು ಬಿದ್ದ ಹಿನ್ನೆಲೆ ಚಂದನ್‌ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Car-incident-near-kumsi-in-Shimoga

ಚಂದನ್‌ ಮೃತದೇಹವನ್ನು ಮೆಗ್ಗಾನ್‌ ಅಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಕುಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನೀಡಿದರು.

ಇದನ್ನೂ ಓದಿ » ಸಿಗಂದೂರು ಸೇತುವೆ, ಸಂಸದ ರಾಘವೇಂದ್ರ ಪ್ರಕಟಿಸಿದ ಫೋಟೊ ವೈರಲ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment