ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
RAINFALL NEWS, 15 OCTOBER 2024 : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಇನ್ನು ನಾಲ್ಕು ದಿನ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 17ರವರೆಗೆ ಭಾರಿ ಮಳೆಯಾಗಲಿದೆ.
ಎಲ್ಲೆಲ್ಲಿ ಯಾವಾಗ ಮಳೆಯಾಗುತ್ತೆ?
ಅಕ್ಟೋಬರ್ 15 : ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಅಕ್ಟೋಬರ್ 16 : ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಕೋಲಾರ, ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಕೂಲ್ ಕೂಲ್ ವಾತಾವರಣ, ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಅಕ್ಟೋಬರ್ 17 : ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.
ಅಕ್ಟೋಬರ್ 18 : ತುಮಕೂರು, ಶಿವಮೊಗ್ಗ, ರಾಮನಗರ, ಕೋಲಾರ, ಮಂಡ್ಯ, ಚಿಕ್ಕಮಗಳೂರು, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಮಂಡ್ಯ, ಮೈಸೂರು ಮತ್ತು ಹಾಸನ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






