ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 15 OCTOBER 2024 : ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಿಂದ (Jail) ತನ್ನ ಪತಿ ಕರೆ ಮಾಡಿ ಜೀವ ಬೆದರಿಕೆ ಒಡ್ಡುತ್ತಿದ್ದಾನೆ. ಹಣಕ್ಕೆ ಒತ್ತಾಯಿಸುತ್ತಿದ್ದಾನೆ ಎಂದು ಆರೋಪಿಸಿ ಮಹಿಳೆ ದೂರು ನೀಡಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿತ್ರದುರ್ಗ ಜೈಲಿನಿಂದ ಶಿವಮೊಗ್ಗ ಜಿಲ್ಲೆಗೆ ವರ್ಗಾವಣೆಯಾಗಿರುವ ಖೈದಿ ನಾಗರಾಜ ತನ್ನ ಪತ್ನಿಗೆ ಜೈಲಿನಿಂದಲೇ ಕರೆ ಮಾಡುತ್ತಿದ್ದಾನೆ ಎಂದು ಆರೋಪಿಸಲಾಗಿದೆ. 2024ರ ಮಾರ್ಚ್ ತಿಂಗಳಿಂದ ಹಲವು ಭಾರಿ ಕರೆ ಮಾಡಿ ಒಂದು ಸಾವಿರ, ಎರಡು ಸಾವಿರದಂತೆ ಹಣ ಹಾಕುವಂತೆ ಒತ್ತಾಯಿಸುತ್ತಿದ್ದಾನೆ. ಹಣ ಹಾಕದಿದ್ದಲ್ಲಿ ಜೈಲಿನಿಂದ ಹೊರ ಬಂದ ನಂತರ ಸುಮ್ಮನೆ ಬಿಡುವುದಿಲ್ಲ ಎಂದು ಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಿ ಆತನ ಪತ್ನಿ ದೂರು ನೀಡಿದ್ದಾಳೆ.
ಇದನ್ನೂ ಓದಿ » ಶಿವಮೊಗ್ಗ ಜೈಲು, ಬೀಡಿಗಾಗಿ ಕಲ್ಲು ತೂರಾಟ, ಸ್ಥಳದಲ್ಲೆ ಡಿಐಜಿ ಮೊಕ್ಕಾಂ, ಅಧೀಕಕ್ಷರು ಬದಲಾವಣೆ
ಬೆಂಗಳೂರು ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾಥಿತ್ಯ ಆರೋಪದ ಬೆನ್ನಿಗೆ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದ ಮೇಲೆ ಶಿವಮೊಗ್ಗ ಪೊಲೀಸರು ದಾಳಿ ನಡೆಸಿದ್ದರು. ಈ ಸಂದರ್ಭ ಮೊಬೈಲ್ ಚಾರ್ಜರ್‌ಗಳು ಲಭ್ಯವಾಗಿದ್ದವು ಎಂದು ಪ್ರಕರಣ ದಾಖಲಾಗಿತ್ತು.

LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






