ಸಹ್ಯಾದ್ರಿ ಕಾಲೇಜಿನಲ್ಲಿ ಸೈನ್ಸ್‌ ಪಾರ್ಕ್‌ಗೆ ಹಿರಿಯ ವಿದ್ಯಾರ್ಥಿಗಳ ವಿರೋಧ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 15 OCTOBER 2024 : ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಸೈನ್ಸ್‌ ಪಾರ್ಕ್‌ (Science Park) ಸ್ಥಾಪನೆಗೆ ಹಳೆಯ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಕಾಲೇಜು ಕ್ಯಾಂಪಸ್‌ ಅನ್ನು ಶೈಕ್ಷಣಿಕ ಚಟುವಟಿಕೆಗೆ ಮಾತ್ರ ಸೀಮಿತಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಳೆಯ ವಿದ್ಯಾರ್ಥಿಗಳು ಸಂಘದ ಪ್ರಮುಖರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ವಿಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ವಿದ್ಯುನ್ಮಾನ ಮಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಕೇಂದ್ರ ಯೋಜನೆಯನ್ನು ಸರ್ಕಾರ ಕೈ ಬಿಡಬೇಕು ಎಂದು ಆಗ್ರಹಿಸಿದರು.

‘ಯಾರಿಗೂ ತಿಳಿಯದಂತೆ ನೋಡಿಕೊಂಡಿದ್ದಾರೆʼ

ನಿವೃತ್ತ ಪ್ರಾಧ್ಯಾಪಕ ಪ್ರೊ. ರಾಜೇಂದ್ರ ಚೆನ್ನಿ ಮಾತನಾಡಿ, ಸಹ್ಯಾದ್ರಿ ಕಾಲೇಜಿನ ಜಮೀನಿನಲ್ಲಿ ವಿಜ್ಞಾನ ಕೇಂದ್ರ ಕೆಟಗರಿ 2 ಸ್ಥಾಪಿಸುವ ಯೋಜನೆ ಕೂಡಲೆ ಕೈಬಿಡಬೇಕು. ವಿಜ್ಞಾನ ಕೇಂದ್ರಕ್ಕೆ ಮೊದಲು ನವುಲೆ ಬಳಿ ಜಾಗ ನಿಗದಿಯಾಗಿತ್ತು. ತಜ್ಞರ ಸಮಿತಿ ಆ ಸ್ಥಳ ಸೂಕ್ತವಿಲ್ಲ ಎಂದು ವರದಿ ನೀಡಿತ್ತು. ಆಗ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಜಿಲ್ಲಾಧಿಕಾರಿಯನ್ನು ಒಳಗೊಂಡ ಸಮಿತಿ, ಸಹ್ಯಾದ್ರಿ ಕಾಲೇಜಿನ ಏಳು ಎಕರೆ ಜಮೀನನ್ನು ಗುರುತಿಸಿದೆ. ಈ ವಿಷಯಗಳು ಹೊರ ಬರದಂತೆ ನೋಡಿಕೊಳ್ಳಲಾಗಿದೆ ಎಂದು ಆರೋಪಿಸಿದರು.

Oppose-for-Science-Park-in-Sahyadri-college

2022ರಲ್ಲಿ ರಾಜ್ಯ ಸರಕಾರ ಸಹ್ಯಾದ್ರಿ ಕಾಲೇಜಿಗೆ ಸೇರಿದ 7 ಎಕರೆ ಜಮೀನನ್ನು ರಾಜ್ಯ ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಇಲಾಖೆಗೆ ವಿಜ್ಞಾನ ಕೇಂದ್ರ ಕೆಟಗರಿ 2 ಸ್ಥಾಪಿಸಲು 30 ವರ್ಷಗಳ ಅವಧಿಗೆ ಗುತ್ತಿಗೆಗೆ ನೀಡಿದೆ. ಈ ಹಿಂದೆ ಕಾಲೇಜಿನ ಜಾಗವನ್ನು ಖೇಲೋ ಇಂಡಿಯಾಗೆ ನೀಡಿದಾಗಲೂ ವಿರೋಧ ವ್ಯಕ್ತಪಡಿಸಿದ್ದೆವು ಎಂದು ತಿಳಿಸಿದರು.

ಯಾರೆಲ್ಲ ಏನೇನು ಹೇಳಿದರು?

ಸಹ್ಯಾದ್ರಿ ಕಾಲೇಜು ದುಷ್ಟಶಕ್ತಿಗಳ ಕೆಂಗಣ್ಣಿಗೆ ಗುರಿಯಾದಂತಿದೆ. ಪ್ರಸ್ತುತ ಖಾಸಗಿ ಕಾಲೇಜುಗಳ ಭರಾಟೆಯಲ್ಲಿ ಸಹ್ಯಾದ್ರಿ ಕಾಲೇಜು ಬಡವರು, ಕೂಲಿಕಾರ್ಮಿಕರ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುತ್ತಿದೆ. ಆದ್ದರಿಂದ, ಇಲ್ಲಿ ಉನ್ನತಮಟ್ಟದ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಬೇಕಿದೆ. ಸಹ್ಯಾದ್ರಿ ಕಾಲೇಜಿನ 7 ಎಕರೆ ಜಾಗವನ್ನು 30 ವರ್ಷಕ್ಕೆ ಗುತ್ತಿಗೆ ನೀಡಿರುವುದಕ್ಕೆ ಸಂಪೂರ್ಣ ವಿರೋಧವಿದೆ.

– ಆಯನೂರು ಮಂಜುನಾಥ್‌, ಮಾಜಿ ಸಂಸದ

ಜಮೀನನ್ನು 30 ವರ್ಷಗಳ ಕಾಲ ಗುತ್ತಿಗೆ ನೀಡಲು ಕುವೆಂಪು ವಿವಿಯ ಈ ಹಿಂದಿನ ಸಿಂಡಿಕೇಟ್‌ ಸಭೆ ಅನುಮೋದನೆ ನೀಡಿದೆ. ಮುಂದಿನ ಸಭೆಯಲ್ಲಿ ಇದನ್ನು ರದ್ದುಗೊಳಿಸುವ ನಿರ್ಣಯ ಕೈಗೊಳ್ಳಲಾಗುವುದು. ಅಗತ್ಯವಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ನಿಯೋಗ ಕರೆದೊಯ್ಯುತ್ತೇವೆ.

– ಕೆ.ಪಿ.ಶ್ರೀಪಾಲ್‌, ಕುವೆಂಪು ವಿವಿ ಸಿಂಡಿಕೇಟ್‌ ಸದಸ್ಯ

ಪ್ರಮುಖರಾದ ಎನ್‌.ಮಂಜುನಾಥ್‌, ಎಂ.ಗುರುಮೂರ್ತಿ, ಯೋಗೀಶ್‌, ಶಿವಬಸಪ್ಪ, ಚಂದ್ರಣ್ಣ ಸೇರಿದಂತೆ ಹಲವರು ಇದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 15, 2024

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment