ಶಿವಮೊಗ್ಗಕ್ಕೆ ಇವತ್ತು ಯಲ್ಲೋ ಅಲರ್ಟ್‌, ಎಲ್ಲೆಲ್ಲಿ ಎಷ್ಟು ಹೊತ್ತಿಗೆ ಮಳೆಯಾಗಿತ್ತೆ?

WEATHER REPORT, 16 OCTOBER 2024 : ಮಳೆ ಮತ್ತು ಚಂಡಮಾರುತದ ಪರಿಣಾಮ (Alert) ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ ಇಳಿಕೆಯಾಗಿದೆ. ಬಿಸಿಲಿನ ಝಳದಿಂದ ಜನರಿಗೆ ರಕ್ಷಣೆ ಸಿಕ್ಕಂತಾಗಿದೆ. ಇನ್ನೊಂದೆಡೆ ಇವತ್ತು ಕೂಡ ಮಳೆಯಾಗುವ ಸಾಧ್ಯತೆ ಇದೆ.

ಶಿವಮೊಗ್ಗಕ್ಕೆ ಯಲ್ಲೋ ಅಲರ್ಟ್‌

ಇತ್ತ ಹವಾಮಾನಾ ಇಲಾಖೆ ಶಿವಮೊಗ್ಗ ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಘೋಷಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಚಂಡಮಾರುತದ ಪರಿಣಾಮ ಪಕ್ಕದ ಚಿಕ್ಕಮಗಳೂರು, ಹಾವೇರಿ ಮತ್ತು ಕರಾವಳಿ ಜಿಲ್ಲೆಗಳಿಗು ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

» ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಮಧ್ಯಾಹ್ನದ ನಂತರ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ.

» ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಬೆಳಗ್ಗೆಯಿಂದಲೇ ಮಳೆಯಾಗಲಿದೆ. ಅಲ್ಲಲ್ಲಿ ಸಾಧಾರಣದಿಂದ ಭಾರಿ ಮಳೆಯ ಸಾಧ್ಯತೆ ಇದೆ.

PACE-COLLEGE-PRAJNA-NEWS-ADVT

ಇದನ್ನೂ ಓದಿ » ಶಿವಮೊಗ್ಗದಿಂದ ಯಾವೆಲ್ಲ ವಿಮಾನ ಎಷ್ಟೊತ್ತಿಗೆ ಹೊರಡುತ್ತವೆ? ಇಲ್ಲಿದೆ ಟೈಮ್‌ ಟೇಬಲ್‌

» ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಇಡೀ ದಿನ ಮಳೆಯಾಗುವ ಸಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

WEATHER-REPORT-SHIMOGA-

Leave a Comment