ಶಾಲೆ ಆವರಣದಲ್ಲಿಯೇ ಕುಸಿದು ಬಿದ್ದು ಶಿಕ್ಷಕ ಕೊನೆಯುಸಿರು

SAGARA NEWS, 16 OCTOBER 2024 : ವಿದ್ಯಾರ್ಥಿಗಳಿಗೆ ವಾಲಿಬಾಲ್‌ ತರಬೇತಿ ನೀಡುತ್ತಿದ್ದಾಗ ಶಾಲೆ ಆವರಣದಲ್ಲಿಯೇ ಕುಸಿದು ಬಿದ್ದು ಶಿಕ್ಷಕರೊಬ್ಬರು (Teacher) ಮೃತಪಟ್ಟಿದ್ದಾರೆ. ಸಾಗರ ತಾಲೂಕು ಖಾಸಗಿ ಶಾಲೆಯೊಂದರಲ್ಲಿ ಇಂದು ಮಧ್ಯಾಹ್ನ ಘಟನೆ ಸಂಭವಿಸಿದೆ.

ಪ್ರಗತಿ ಸಂಯುಕ್ತ ಪ್ರೌಢಶಾಲೆಯ ಶಿಕ್ಷಕ ಗಜಾನನ ಹಿರೇಮಠ ಮೃತರು. ವಿದ್ಯಾರ್ಥಿಗಳಿಗೆ ವಾಲಿಬಾಲ್‌ ತರಬೇತಿ ನೀಡುತ್ತಿದ್ದಾಗ ಕುಸಿದು ಬಿದ್ದಿದ್ದಾರೆ. ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಅವರನ್ನು ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

Teacher-Breathed-last-at-sagara

ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿಟಿ ಬಸ್‌ ಪಲ್ಟಿ

ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮಪ್ಪ, ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಪದಾಧಿಕಾರಿಗಳು, ಶಿಕ್ಷಕರು ಸೇರಿದಂತೆ ಹಲವರು ಆಸ್ಪತ್ರೆಗೆ ಭೇಟಿ ನೀಡಿದ್ದರು.

PACE-COLLEGE-PRAJNA-NEWS-ADVT

Teacher-Breathed-last-at-sagara

Leave a Comment