ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
BANGALORE NEWS, 18 OCTOBER 2024 : ಬೆಂಗಳೂರಿನ ಲಾಡ್ಜ್ (Lodge) ಒಂದರ ಕೊಠಡಿಯಲ್ಲಿ ಮೃತಪಟ್ಟಿದ್ದ ತೀರ್ಥಹಳ್ಳಿ ತಹಶೀಲ್ದಾರ್ ಜಿ.ಬಿ.ಜಕ್ಕನಗೌಡರ್ ಅವರ ಮೃತದೇಹವನ್ನು ಉಪ್ಪಾರಪೇಟೆ ಠಾಣೆ ಪೊಲೀಸರು ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಿದರು.
‘ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಮೃತದೇಹವನ್ನು ಹಸ್ತಾಂತರ ಮಾಡಲಾಯಿತು. ಮರಣೋತ್ತರ ಪರೀಕ್ಷೆಯಾಗಿದೆ ವರದಿ ಬರಬೇಕಿದೆ’ ಎಂದು ಪೊಲೀಸರು ತಿಳಿಸಿದರು.

ಇದನ್ನೂ ಓದಿ » ಲಾಡ್ಜ್ ಕೊಠಡಿಯಲ್ಲಿ ತೀರ್ಥಹಳ್ಳಿ ತಹಶೀಲ್ದಾರ್ ಮೃತದೇಹ ಪತ್ತೆ
ಜಿ.ಬಿ.ಜಕ್ಕನಗೌಡರ್ ಅವರು ಮೂಲತಃ ಗದಗ ಜಿಲ್ಲೆಯವರು. ಪತ್ನಿ ಇಬ್ಬರು ಪತ್ರಿಯರಿದ್ದಾರೆ. ಘಟನೆ ಸಂಭವಿಸಿದಾಗ ಪತ್ನಿ ಮತ್ತು ಓರ್ವ ಪುತ್ರಿ ತೀರ್ಥಹಳ್ಳಿಯಲ್ಲಿ ಇದ್ದರು. ಮತ್ತೊಬ್ಬ ಮಗಳು ರಂಜಿತಾ ಅವರು ಚಾರ್ಟೆಡ್ ಅಕೌಂಟೆಂಟ್ ಆಗಿದ್ದು, ಬೆಂಗಳೂರಿನಲ್ಲಿದ್ದರು.
» ತಹಶೀಲ್ದಾರ್ ಕುಟುಂಬಕ್ಕೆ ಸಾಂತ್ವನ
ಇನ್ನು, ವಿಷಯ ತಿಳಿಯುತ್ತಿದ್ದಂತೆ ಶಾಸಕ ಜ್ಞಾನೇಂದ್ರ ಅವರು ತಹಶೀಲ್ದಾರ್ ಜಿ.ಬಿ.ಜಕ್ಕನಗೌಡರ್ ಕುಟುಂಬದವರನ್ನು ಭೇಟಿಯಾದರು. ಕುಟುಂಬದವರಿಗೆ ಆರಗ ಜ್ಞಾನೇಂದ್ರ ಅವರು ಸಾಂತ್ವನ ಹೇಳಿದರು. ಇನ್ನು, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಸಾಂತ್ವನ ಹೇಳಿದರು.

LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು















