ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
BANGALORE NEWS, 18 OCTOBER 2024 : ನಂದಿನಿ (Nandini) ಬ್ರ್ಯಾಂಡ್ ಹೆಸರಿನಲ್ಲಿಯೇ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳವು (ಕೆಎಂಎಫ್) ಇಡ್ಲಿ ಮತ್ತು ದೋಸೆ ಹಿಟ್ಟು ಮಾರುಕಟ್ಟೆಗೆ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಇನ್ನು 10 ದಿನಗಳ ಒಳಗೆ ಈ ಹಿಟ್ಟು ಮಾರುಕಟ್ಟೆಯಲ್ಲಿ ದೊರೆಯಲಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿಯೇ ದೋಸೆ ಮತ್ತು ಇಡ್ಲಿ ಹಿಟ್ಟು ಮಾರಾಟ ಮಾಡಲು ಯೋಜಿಸಲಾಗಿದೆ. ಆರಂಭದಲ್ಲಿ 10 ಸಾವಿರದಿಂದ 20 ಸಾವಿರ ಕೆ.ಜಿಯಷ್ಟು ಹಿಟ್ಟು ಮಾರಾಟ ಮಾಡಲಾಗುತ್ತದೆ. ಆ ಬಳಿಕ ಹಂತ ಹಂತವಾಗಿ ರಾಜ್ಯಾದ್ಯಂತ ವಿಸ್ತರಣೆಗೆ ಯೋಜಿಸಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ರೈತರಿಗೆ ಮೂರು ತಿಂಗಳ ಸರ್ಟಿಫಿಕೇಟ್ ಕೋರ್ಸ್
ದೋಸೆ – ಇಡ್ಲಿ ಹಿಟ್ಟು 450 ಗ್ರಾಂ ಮತ್ತು 900 ಗ್ರಾಂ ಪ್ಯಾಕೆಟ್ಗಳಲ್ಲಿ ದೊರೆಯಲಿವೆ. ಇದರ ದರದ ಕುರಿತು ಇನ್ನಷ್ಟೆ ಮಾಹಿತಿ ಲಭ್ಯವಾಗಬೇಕಿದೆ. ಡೈರಿ ಉತ್ಪನ್ನಗಳು ಮತ್ತು ಗುಣಮಟ್ಟಕ್ಕೆ ಹೆಸರಾಗಿರುವ ನಂದಿನಿ ಬ್ರ್ಯಾಂಡ್ ಈಗ ದೋಸೆ – ಇಡ್ಲಿ ಹಿಟ್ಟು ಮಾರುಕಟ್ಟೆಗೆ ಪರಿಚಯಿಸುವ ಮೂಲಕ ಮತ್ತಷ್ಟು ಗ್ರಾಹಕರಿಗೆ ಹತ್ತಿರವಾಗಲಿದೆ.