ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 19 OCTOBER 2024 : ಶಿಕಾರಿಪುರ ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ (ಅಡಿಕೆ, ತೆಂಗು, ಮಾವು, ಗೇರು, ಜಾಯಿಕಾಯಿ ಇತರೆ) ಕಾರ್ಯಕ್ರಮದಡಿ ವೈಯಕ್ತಿಕ ಕಾಮಗಾರಿ ಕೈಗೊಳ್ಳಲು ಇಚ್ಛಿಸುವ ರೈತರಿಂದ (Farmer) ಅರ್ಜಿ ಆಹ್ವಾನಿಸಿದೆ.
ಆಸಕ್ತ ರೈತರು ಅರ್ಜಿ ನಮೂನೆಯನ್ನು ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಪಡೆಯಬೇಕು. ಭರ್ತಿ ಮಾಡಿದ ಅರ್ಜಿಯೊಂದಿಗೆ ಉದ್ಯೋಗ ಚೀಟಿ, ಆಧಾರ್ ಕಾರ್ಡ್ ಪ್ರತಿ, ಪಹಣಿ, ಜಾತಿ ಪ್ರಮಾಣ ಪತ್ರ (ಎಸ್‌ಸ್ಸಿ/ಎಸ್‌ಟಿ ಆಗಿದ್ದಲ್ಲಿ), ಸಣ್ಣ ಹಿಡುವಳಿ ಪ್ರಮಾಣ ಪತ್ರ (ಸಾಮಾನ್ಯ ವರ್ಗದವರಿಗೆ) ಗಳನ್ನು ಲಗತ್ತಿಸಿ ನ.5ರ ಒಳಗಾಗಿ ಸಲ್ಲಿಸುವಂತೆ ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಹಿಂದೆ ಫಲಾನುಭವಿಗಳಾಗಿದ್ದಲ್ಲಿ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
ಇದನ್ನೂ ಓದಿ » ಕೃಷಿ ಮೇಳ, ಈ ಬಾರಿ ಮೇಳದಲ್ಲಿ ಏನೆಲ್ಲ ಇದೆ? ಇಲ್ಲಿದೆ ಡಿಟೇಲ್ಸ್
ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ, ಬೆಂಗಳೂರು, ಜಿಲ್ಲಾ ಸಹಕಾರ ಯೂನಿಯನ್, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ, ಹಾಗೂ ಸಹಕಾರ ಇಲಾಖೆಯ ಸಹಯೋಗದಲ್ಲಿ ರಾಜ್ಯ ಮಟ್ಟದ ವಿಶೇಷ ಸಹಕಾರ ತರಬೇತಿ ಅಯೋಜಿಸಲಾಗಿದೆ. ಅ.19 ರಂದು ಮಾಚೇನಹಳ್ಳಿಯ ಹಾಲು ಒಕ್ಕೂಟದ ಕುರಿಯನ್ ಸಭಾಂಗಣದಲ್ಲಿ ಶಿವಮೊಗ್ಗ ಸಹಕಾರಿ ಹಾಲು ಒಕ್ಕೂಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಒಂದು ದಿನದ ಶಿಬಿರ ನಡೆಯಲಿದೆ.» ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಸಹಕಾರ ಶಿಬಿರ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422