ಬಂಗಾರಪ್ಪ ಜನ್ಮದಿನ, ಮೂವರಿಗೆ ಬಂಗಾರ ಪ್ರಶಸ್ತಿ, ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 23 OCTOBER 2024 : ಮಾಜಿ ಮುಖ್ಯಮಂತ್ರಿ ಎಸ್‌.ಬಂಗಾರಪ್ಪ ಅವರ ಜನ್ಮದಿನದ ಸಂದರ್ಭ ನೀಡುವ ಬಂಗಾರ ಪ್ರಶಸ್ತಿಗೆ (Award) ಮೂವರು ಸಾಧಕರನ್ನು ಆಯ್ಕೆ ಮಾಡಲಾಗಿದೆ. ಅ.26ರಂದು ಸೊರಬದ ಬಂಗಾರಧಾಮದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌.ಬಂಗಾರಪ್ಪ ವಿಚಾರ ವೇದಿಕೆ ಅಧ್ಯಕ್ಷ ವೇಣುಗೋಪಾಲ್‌ ನಾಯಕ್‌, ಸುಮಂಗಲಿ ಸೇವಾಶ್ರಮದ ಅಧ್ಯಕ್ಷೆ ಎಸ್‌.ಜಿ.ಸುಶೀಲಮ್ಮ, ಸಾಹಿತಿ ಕುಂ.ವೀರಭದ್ರಪ್ಪ, ಗ್ರಾಮೀಣ ರಂಗಭೂಮಿ ಕಲಾವಿದೆ ಪ್ರತಿಭಾ ನಾರಾಯಣ್‌ ಅವರಿಗೆ ಈ ಬಾರಿ ಬಂಗಾರ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿಯು ಒಂದು ಲಕ್ಷ ರೂ. ನಗದು ಮತ್ತು ತಾಮ್ರದ ಫಲಕವನ್ನು ಹೊಂದಿರಲಿದೆ ಎಂದರು.

ಉದ್ಘಾಟನೆಗೆ ಹೋಮ್‌ ಮಿನಿಸ್ಟರ್‌ Award

ಅ.26ರಂದು ಸಂಜೆ 4.30ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಉದ್ಘಾಟಿಸಲಿದ್ದಾರೆ. ನಟ ಡಾ. ಶಿವರಾಜ್‌ಕುಮಾರ್, ಶಿಕ್ಷಣ ಸಚಿವ ಎಸ್‌.ಮಧು ಬಂಗಾರಪ್ಪ, ಬಂಗಾರಪ್ಪ ಅವರ ಒಡನಾಡಿ ಬಸಪ್ಪ ಅಂಕರವಳ್ಳಿ, ಬಂಗಾರಪ್ಪ ವಿಚಾರ ವೇದಿಕೆ ಅಧ್ಯಕ್ಷ ವೇಣುಗೋಪಾಲ್‌ ನಾಯಕ್‌, ನಾಟಕ ಅಕಾಡೆಮಿ ಅಧ್ಯಕ್ಷ ನಾಗರಾಜ ಮೂರ್ತಿ ಕಾರ್ಯಕ್ರಮದಲ್ಲಿ ಇರಲಿದ್ದಾರೆ ಎಂದರು.

Bangarappa-Birthday-programme-venugopala-naki-and-gd-manjunath

ಅ.26ರಂದು ಬೆಳಗ್ಗೆ 10.30ಕ್ಕೆ ಸೊರಬದ ಡಾ. ರಾಜ್‌ಕುಮಾರ್‌ ರಂಗಮಂದಿರದಲ್ಲಿ ಬಂಗಾರಪ್ಪ ಸಮಾಜವಾದಿ ಚಿಂತನೆಗಳು, ಇಂದಿನ ಪ್ರಸ್ತುತತೆ ಕುರಿತು ವಿಚಾರ ಸಂಕಿರಣ ನಡೆಯಲಿದೆ. ಪ್ರೊ. ಎಲ್‌.ಎನ್‌.ಮುಕುಂದರಾಜ್‌, ಸಿರಾಜ್‌ ಅಹಮದ್‌ ಅವರು ವಿಚಾರ ಮಂಡಿಸಲಿದ್ದಾರೆ. ಪ್ರೊ. ಎಸ್‌.ಜಿ.ಸಿದ್ದರಾಮಯ್ಯ ಅ‍ಧ್ಯಕ್ಷತೆ ವಹಿಸಲಿದ್ದಾರೆ.

ವೇಣುಗೋಪಾಲ್‌ ನಾಯಕ್‌, ಅಧ್ಯಕ್ಷ, ಎಸ್‌.ಬಂಗಾರಪ್ಪ ವಿಚಾರ ವೇದಿಕೆ

BLUE-LINE

ಅ.26ರಂದು ಸಂಜೆ 5 ಗಂಟೆಗೆ ರಂಗಮಂದಿರದಿಂದ ಬಂಗಾರಧಾಮದವರೆಗೆ ಮೆರವಣಿಗೆ ನಡೆಯಲಿದೆ. ಆ ಬಳಿಕ ಬಂಗಾರ ಪ್ರಶಸ್ತ ಪ್ರದಾನ ಸಮಾರಂಭ ನಡೆಯಲಿದೆ.

ಜಿ.ಡಿ.ಮಂಜುನಾಥ್‌, ಕಾಂಗ್ರೆಸ್‌ ನಾಯಕ

BLUE-LINE

ಹೈಸ್ಕೂಲ್‌ ವಿದ್ಯಾರ್ಥಿಗಳಿಗೆ ಸ್ಪರ್ಧೆಗಳು

ಬಂಗಾರಪ್ಪ ಅವರ ಜನ್ಮದಿನೋತ್ಸವ ಅಂಗವಾಗಿ ಅ.24ರಂದು ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಹೈಸ್ಕೂಲ್‌ ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ, ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ. ಪ್ರತಿ ತಾಲೂಕಿನಿಂದ ತಲಾ ಮೂವರು ವಿಜೇತರಿಗೆ ಅ.26ರಂದು ಬಂಗಾರಪ್ಪ ಅವರ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಬಹುಮಾನ ನೀಡಲಾಗುತ್ತದೆ ಎಂದು ವೇಣುಗೊಪಾಲ್‌ ನಾಯಕ್‌ ತಿಳಿಸಿದರು.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಪೊಲೀಸರಿಂದ ದಿಢೀರ್‌ ದಾಳಿ, 512 ಕಡೆ ದಂಡ, 5 ಎಫ್‌ಐಆರ್‌ ದಾಖಲು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 23, 2024

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment