ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
THIRTHAHALLI NEWS, 23 OCTOBER 2024 : ಚನ್ನಪಟ್ಟಣ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಈ ಬೆಳವಣಿಗೆ ಬೆನ್ನಿಗೆ ಹೇಳಿಕೆ ನೀಡಿರುವ ಶಾಸಕ ಆರಗ ಜ್ಞಾನೇಂದ್ರ, ಚುನಾವಣೆಗು (Election) ಮೊದಲೇ ಕಾಂಗ್ರೆಸ್ ಪಕ್ಷ ಸೋಲೊಪ್ಪಿಕೊಂಡಿದೆ ಎಂದು ಬಣ್ಣಿಸಿದ್ದಾರೆ.
ಈ ಸಂಬಂಧ ಆರಗ ಜ್ಞಾನೇಂದ್ರ ಅವರು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ರಾಜ್ಯದ ಮೂರು ವಿಧಾನಸಭೆ ಕ್ಷೇತ್ರಕ್ಕೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಬಿಜೆಪಿ – ಜೆಡಿಎಸ್ ಮೈತ್ರಿಕೂಟ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚುನಾವಣೆಗು ಮೊದಲೇ ಕಾಂಗ್ರೆಸ್ ಪಕ್ಷ ಸೋಲೊಪ್ಪಿಕೊಂಡಿದೆ. ಶತಮಾನದಷ್ಟು ಇತಿಹಾಸ ಇರುವ ಪಕ್ಷಕ್ಕೆ ಚುನಾವಣೆಗೆ ನಿಲ್ಲಿಸಲು ಒಬ್ಬ ಅಭ್ಯರ್ಥಿಯು ಸಿಕ್ಕಿಲ್ಲ. ಆದ್ದರಿಂದ ಬೇರೆ ಪಕ್ಷದಿಂದ ಕರೆತಂದು ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿದ್ದಾರೆ. ಈ ಬೆಳವಣಿಗೆ ಕಾಂಗ್ರೆಸ್ ಪಕ್ಷಕ್ಕೆ ಅವಮಾನ. ಬಿಜೆಪಿ – ಜೆಡಿಎಸ್ ಪಕ್ಷಗಳನ್ನು ಎದುರಿಸುವ ಸಾಮರ್ಥ್ಯವನ್ನು ಕಾಂಗ್ರೆಸ್ ಪಕ್ಷ ಕಳೆದುಕೊಂಡಿದೆ. ಹಾಗಾಗಿ ಮೂರು ಕಡೆ ಉಪ ಚುನಾವಣೆಯಲ್ಲಿ ಬಿಜೆಪಿ – ಜೆಡಿಎಸ್ ಮೈತ್ರಿಕೂಟ ಗೆಲ್ಲಲಿದೆ.
ಆರಗ ಜ್ಞಾನೇಂದ್ರ, ತೀರ್ಥಹಳ್ಳಿ ಶಾಸಕ
![]()
ಇದನ್ನೂ ಓದಿ » ಬಂಗಾರಪ್ಪ ಜನ್ಮದಿನ, ಮೂವರಿಗೆ ಬಂಗಾರ ಪ್ರಶಸ್ತಿ, ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು
















