ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 24 OCTOBER 2024 : ಶಿವಮೊಗ್ಗ ವಿಮಾನ ನಿಲ್ದಾಣದ (Airport) ಲೈಸೆನ್ಸ್ ಅವಧಿಯನ್ನು ನಾಗರಿಕ ವಿಮಾನಯಾನ ನಿರ್ದೇಶನಾಲಯವು (ಡಿಜಿಸಿಎ) ಒಂದು ವರ್ಷಕ್ಕೆ ವಿಸ್ತರಿಸಿದೆ. ಈ ಹಿಂದಿನ ಲೈಸೆನ್ಸ್ ಅವಧಿ ಮಂಗಳವಾರಕ್ಕೆ ಮುಕ್ತಾಯವಾಗಿದೆ.
ಲೈಸೆನ್ಸ್ ಅವಧಿ ವಿಸ್ತರಣೆ ಅಗಿರುವ ಕುರಿತು ಡಿಜಿಸಿಎ ಅಧಿಕಾರಿಗಳು ಶಿವಮೊಗ್ಗ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮಂಗಳವಾರ ಮಾಹಿತಿ ನೀಡಿದ್ದರು ಎಂದು ತಿಳಿದು ಬಂದಿದೆ. ಈಗ 2025ರ ಅಕ್ಟೋಬರ್ 23ರವರೆಗೆ ಶಿವಮೊಗ್ಗ ವಿಮಾನ ನಿಲ್ದಾಣದ ಲೈಸೆನ್ಸ್ ಅವಧಿ ವಿಸ್ತರಣೆ ಆಗಿದೆ.
ಒಂದೊಂದೇ ತಿಂಗಳು ವಿಸ್ತರಣೆಯಾಗುತ್ತಿತ್ತು
» 2023ರ ಫೆಬ್ರವರಿ 27ರಂದು ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ್ದರು. 2024ರ ಆಗಸ್ಟ್ 23ರವರೆಗೆ ವಿಮಾನ ನಿಲ್ದಾಣಕ್ಕೆ ಲೈಸೆನ್ಸ್ ಇತ್ತು.
» ಅವಧಿ ಪೂರ್ಣಗೊಳ್ಳುತ್ತಿದ್ದ ಹಿನ್ನೆಲೆ ಲೈಸೆನ್ಸ್ ನವೀಕರಣಕ್ಕೆ ಡಿಜಿಸಿಎಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಸುರಕ್ಷತೆ ಕ್ರಮಗಳನ್ನು ಕೈಗೊಳ್ಳದ ಹಿನ್ನೆಲೆ ಲೈಸೆನ್ಸ್ ಅವಧಿಯನ್ನು ಕೇವಲ ಒಂದು ತಿಂಗಳಿಗೆ ವಿಸ್ತರಿಸಲಾಗಿತ್ತು. 2024ರ ಸೆಪ್ಟೆಂಬರ್ 23ಕ್ಕೆ ಒಂದು ತಿಂಗಳು ಅವಧಿ ಪೂರ್ಣಗೊಂಡಿತ್ತು.
ಇದನ್ನೂ ಓದಿ » ದಾಖಲೆ ನಿರ್ಮಿಸಿದ ಶಿವಮೊಗ್ಗ ವಿಮಾನ ನಿಲ್ದಾಣ, ಏನದು?
» ಸುರಕ್ಷತೆ ಕ್ರಮ ಕೈಗೊಳ್ಳುವಲ್ಲಿ ವಿಫಲವಾದ ಹಿನ್ನೆಲೆ ವಿಮಾನ ನಿಲ್ದಾಣದ ನಿರ್ವಹಣೆ ಮಾಡುತ್ತಿರುವ ರಾಜ್ಯ ಸರ್ಕಾರದ ಕೈಗಾರಿಕಾ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮಕ್ಕೆ (ಕೆಎಸ್‌ಐಐಡಿಸಿ) 20 ಲಕ್ಷ ರೂ. ದಂಡ ವಿಧಿಸಿ, ಪುನಃ ಒಂದು ತಿಂಗಳು ಮಾತ್ರ ಲೈಸೆನ್ಸ್ ಅವಧಿ ವಿಸ್ತರಣೆ ಮಾಡಲಾಗಿತ್ತು. ಈ ಅವಧಿ 2024ರ ಅಕ್ಟೋಬರ್ 23ಕ್ಕೆ ಮುಕ್ತಾಯವಾಗುತ್ತಿತ್ತು.
ಇದನ್ನೂ ಓದಿ » ಶಿವಮೊಗ್ಗದಿಂದ ಯಾವೆಲ್ಲ ವಿಮಾನ ಎಷ್ಟೊತ್ತಿಗೆ ಹೊರಡುತ್ತವೆ? ಇಲ್ಲಿದೆ ಟೈಮ್ ಟೇಬಲ್
» ಎರಡು ಬಾರಿ ಒಂದೊಂದು ತಿಂಗಳು ಮಾತ್ರ ಲೈಸೆನ್ಸ್ ಅವಧಿ ವಿಸ್ತರಣೆ ಮಾಡಿದ್ದ ಡಿಜಿಸಿಎ, ತನ್ನ ಸೂಚನೆಗಳನ್ನು ಪಾಲಿಸಿದ ಹಿನ್ನೆಲೆ ಒಂದು ವರ್ಷದ ಅವಧಿಗೆ ಲೈಸೆನ್ಸ್ ನವೀಕರಣ ಮಾಡಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422