ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 25 OCTOBER 2024 : ಶಿವಮೊಗ್ಗ – ಭದ್ರಾವತಿ ಹೆದ್ದಾರಿಯಲ್ಲಿ (Highway) ಕಳೆದ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಲಾರಿ ಮತ್ತು ಬೈಕ್ ನಡುವೆ ಅಪಘಾತವಾಗಿದೆ.
ಭದ್ರಾವತಿ ಕಡೆ ತೆರಳುತ್ತಿದ್ದ ಲಾರಿ ಮತ್ತು ಎದುರಿನಿಂದ ಬರುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿಯಾದ ರಭಸಕ್ಕೆ ಬೈಕ್ನಲ್ಲಿದ್ದ ಮೂವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಈ ಪೈಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬನನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಆತನ ಸ್ಥಿತಿ ಗಂಭೀರವಾಗಿದೆ.
ಲಾರಿಗೆ ಡಿಕ್ಕಿ ಹೊಡೆಯುವ ಮುನ್ನ ಈ ಬೈಕ್ ಮತ್ತೊಂದು ಬೈಕ್ಗೆ ಡಿಕ್ಕಿ ಹೊಡೆದಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
ಇದನ್ನೂ ಓದಿ » ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಗುಡ್ ನ್ಯೂಸ್ ನೀಡಿದ ಡಿಜಿಸಿಎ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422