NEWS HIGHLIGHTS
SHIMOGA NEWS, 25 OCTOBER 2024 : ಸಂಚಾರ ಠಾಣೆ ಪೊಲೀಸ್ ಸಿಬ್ಬಂದಿಯನ್ನು ಬಾನೆಟ್ (Bonnet) ಮೇಲೆ ಹೊತ್ತೊಯ್ದ ಪ್ರಕರಣ ಸಂಬಂಧ ಕಾರು ಚಾಲಕನನ್ನು ಬಂಧಿಸಲಾಗಿದೆ. ಭದ್ರಾವತಿ ಹೊಸಮನೆ ಬಡಾವಣೆ ವಾಸಿ ಮಿಥುನ್ ಜಗದಾಳೆ ಬಂಧಿತ.
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.ಸಹ್ಯಾದ್ರಿ ಕಾಲೇಜು ಮುಂಭಾಗ ಗುರುವಾರ ಮಧ್ಯಾಹ್ನ ವಾಹನ ತಪಾಸಣೆ ಸಂದರ್ಭ ಪೊಲೀಸ್ ಸಿಬ್ಬಂದಿಯನ್ನು ಕಾರಿನ ಬಾನೆಟ್ ಮೇಲೆ ಹೊತ್ತೊಯ್ಯಲಾಗಿತ್ತು. ವಿಡಿಯೋ ವೈರಲ್ ಆಗಿ, ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ಬಳಿಕ ಪೊಲೀಸರು ಕಾರು ಚಾಲಕನನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.

ಕಾರು ಬಾನೆಟ್ ಮೇಲೆ ಪೊಲೀಸ್ ಪೇದೆಯನ್ನು ಹೊತ್ತೊಯ್ದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಕಾರು ಚಾಲಕನನ್ನು ಭದ್ರಾವತಿಯ ಮಿಥುನ್ ಜಗದಾಳೆ ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಚಾಲಕನನ್ನು ಬಂಧಿಸಲಾಗಿದೆ.
ಜಿ.ಕೆ.ಮಿಥುನ್ ಕುಮಾರ್, ಜಿಲ್ಲಾ ರಕ್ಷಣಾಧಿಕಾರಿ

![]()
ಇದನ್ನೂ ಓದಿ » ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಗುಡ್ ನ್ಯೂಸ್ ನೀಡಿದ ಡಿಜಿಸಿಎ