ಶಿವಮೊಗ್ಗಕ್ಕೆ ನಾಳೆ ಹೋಮ್‌ ಮಿನಿಸ್ಟರ್‌, ಎಲ್ಲಿಗೆಲ್ಲ ಭೇಟಿ ನೀಡ್ತಾರೆ?

SHIMOGA NEWS, 25 OCTOBER 2024 : ಗೃಹ ಸಚಿವ (Home Minister) ಡಾ. ಜಿ.ಪರಮೇ‍ಶ್ವರ್‌ ಶಿವಮೊಗ್ಗ ಜಿಲ್ಲೆ ಪ್ರವಾಸ ಕೈಗೊಂಡಿದ್ದಾರೆ. ಅ.26 ಮತ್ತು 27ರಂದು ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. (ಈ ಸುದ್ದಿಯನ್ನು ಇನ್ನು 37 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಅ.26ರಂದು ಬೆಳಗ್ಗೆ 11.30ಕ್ಕೆ ಶಿವಮೊಗ್ಗದ ಸರ್ಕ್ಯುಟ್‌ ಹೌಸ್‌ಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಡಿಎಆರ್‌ ಆವರಣದಲ್ಲಿ ನಿರ್ಮಿಸಿರುವ ಪೊಲೀಸ್‌ ಸಮುದಾಯ ಭವನ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಡಿಎಆರ್‌ ಸಭಾಂಗಣದಲ್ಲಿ ಜಿಲ್ಲಾ ಅಪರಾಧ ವಿಮರ್ಶನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ » ಬಾನೆಟ್‌ ಮೇಲೆ ಕಾನ್‌ಸ್ಟೇಬಲ್‌ನನ್ನು ಹೊತ್ತೊಯ್ದ ಚಾಲಕ ಅರೆಸ್ಟ್‌

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ಸಂಜೆ 4.30ಕ್ಕೆ ಶಿವಮೊಗ್ಗದಿಂದ ಸೊರಬಕ್ಕೆ ರಸ್ತೆ ಮಾರ್ಗದಲ್ಲಿ ತೆರಳಲಿದ್ದಾರೆ. ಸಂಜೆ 6 ಗಂಟೆಗೆ ಸೊರಬದ ಬಂಗಾರಧಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್‌.ಬಂಗಾರಪ್ಪ ಅವರ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 9.30ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ.

ಅ.27ರ ಬೆಳಗ್ಗೆ 6.30ಕ್ಕೆ ಶಿವಮೊಗ್ಗದಿಂದ ಹೊರಟು ಬೆಳಗ್ಗೆ 9.30ಕ್ಕೆ ತುಮಕೂರು ತಲುಪಲಿದ್ದಾರೆ.

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Shimoga-News-update

Leave a Comment