SHIMOGA NEWS, 26 OCTOBER 2024 : ಶಿವಮೊಗ್ಗದ ನಮ್ ಟೀಮ್ ವತಿಯಿಂದ ಅಕ್ಟೋಬರ್ 26 ಮತ್ತು 27ರಂದು ಕುವೆಂಪು ರಂಗಮಂದಿರದಲ್ಲಿ ನೀನಾಸಂ ನಾಟಕೋತ್ಸವ (Drama) ಆಯೋಜಿಸಲಾಗಿದೆ. ರಾಜ್ಯಾದ್ಯಂತ ಪ್ರದರ್ಶನ ಕಂಡು ಜನರ ಮೆಚ್ಚುಗೆ ಗಳಿಸಿರುವ ಎರಡು ನಾಟಕಗಳನ್ನು ಪ್ರದರ್ಶಿಸಲಾಗುತ್ತಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಮ್ ಟೀಮ್ನ ಪ್ರಧಾನ ಕಾರ್ಯದರ್ಶಿ ಹೊನ್ನಾಳಿ ಚಂದ್ರಶೇಖರ್, ಪ್ರತಿ ವರ್ಷದಂತೆ ಈ ಬಾರಿಯು ನೀನಾಸಂ ನಾಟಕೋತ್ಸವ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಅ.26ರಂದು ಸಂಜೆ 6.45ಕ್ಕೆ ಮಾಲತೀ ಮಾಧವ ನಾಟಕ ಪ್ರದರ್ಶನವಾಗಲಿದೆ. ಕೆ.ವಿ.ಅಕ್ಷರ ಇದರ ನಿರ್ದೇಶನ ಮಾಡಿದ್ದಾರೆ. ಅ.27ರಂದು ಅಂಕದ ಪರದೆ ನಾಟಕ ಪ್ರದರ್ಶಿಸಲಾಗುತ್ತಿದೆ. ಜಯಂತ್ ಕಾಯ್ಕಿಣಿ ನಿರ್ದೇಶನ ಮಾಡಿದ್ದಾರೆ. ನೇರವಾಗಿ ನಾಟಕ ಪ್ರದರ್ಶನ ಮಾಡಲಾಗುತ್ತದೆ. ವೇದಿಕೆ ಕಾರ್ಯಕ್ರಮ ಇರುವುದಿಲ್ಲ.
ಹೊನ್ನಾಳಿ ಚಂದ್ರಶೇಖರ್, ನಮ್ ಟೀಮ್ ಪ್ರಧಾನ ಕಾರ್ಯದರ್ಶಿ
ಎರಡು ನಾಟಕಕ್ಕೆ ಪ್ರತ್ಯೇಕವಾಗಿ ಪ್ರವೇಶ ದರ ನಗದಿಪಡಿಸಲಾಗಿದೆ. ಆಸಕ್ತರು 98445 18866 ಮೊಬೈಲ್ ನಂಬರ್ ಸಂಪರ್ಕಿಸಿ ಈಗಲೆ ಟಿಕೆಟ್ ಖರೀದಿಸಬಹುದಾಗಿದೆ.
ಸುದ್ದಿಗೋಷ್ಠಿಯಲ್ಲಿ ನಮ್ ಟೀಮ್ನ ಖಜಾಂಚಿ ಸಮನ್ವಯ ಕಾಶಿ, ಹೊತ್ತಾರೆ ಶಿವು ಉಪಸ್ಥಿತರಿದ್ದರು.
ಇದನ್ನೂ ಓದಿ » ಲಿಂಗನಮಕ್ಕಿ ಚಲೋ, ಕಾರ್ಗಲ್ನಲ್ಲಿ ರೈತರು ಪೊಲೀಸ್ ವಶಕ್ಕೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200