NEWS HIGHLIGHTS
SAGARA NEWS, 29 OCTOBER 2024 : ರಸ್ತೆಯಲ್ಲಿ ದಿಢೀರ್ ದೆವ್ವ ಪ್ರತ್ಯಕ್ಷವಾಗಿ ಬೈಕ್ ಸವಾರರಿಬ್ಬರು ಗಾಯಗೊಂಡಿದ್ದಾರೆ. ಈ ಪೈಕಿ ಒಬ್ಬಾತನ ಸ್ಥಿತಿ ಗಂಭೀರವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಬ್ಬಿಸಲಾಗಿದೆ (Viral). ಇದರಿಂದ ಸಾರ್ವಜನಿಕರು ಆತಂಕಕ್ಕೀಡಾಗಿದ್ದಾರೆ. ಇಂತಹ ಪೋಸ್ಟ್ ಪ್ರಕಟಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.ಸಾಗರ ತಾಲೂಕು ಕಾರ್ಗಲ್ ಸಮೀಪದ ಕಂಚಿಕೈ ರಸ್ತೆಯಲ್ಲಿ ಇಬ್ಬರು ಬೈಕ್ ಸವರಾರಿಗೆ ದೆವ್ವ ಎದುರಾಗಿದೆ. ಒಬ್ಬರ ಸ್ಥಿತಿ ಗಂಭೀರವಾಗಿದ್ದು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮತ್ತೊಬ್ಬರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು. ಇದರಿಂದ ಈ ಭಾಗದ ಜನರಲ್ಲಿ ಆತಂಕ ಉಂಟಾಗಿತ್ತು.

ಪೊಲೀಸ್ ಇಲಾಖೆಯಿಂದ ವಾರ್ನಿಂಗ್
ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವುದು, ಫಾರ್ವರ್ಡ್ ಮಾಡುವುದು, ಶೇರ್ ಮಾಡುವುದು ಅಪರಾಧ. ಈ ರೀತಿ ಮಾಡುವುದು ಕಂಡುಬಂದಲ್ಲಿ, ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಪ್ರಕಟಣೆ, ಜಿಲ್ಲಾ ಪೊಲೀಸ್ ಇಲಾಖೆ

![]()
ಇದನ್ನೂ ಓದಿ » ಭೂ ಹಕ್ಕು, ನಾಳೆ ವಿಧಾನಸೌಧದಲ್ಲಿ ರೈತರೊಂದಿಗೆ ಮಹತ್ವದ ಮೀಟಿಂಗ್, ಯಾರೆಲ್ಲ ಭಾಗವಹಿಸ್ತಾರೆ?