ಕಾರು, ಬೈಕ್‌ ಡಿಕ್ಕಿ, ಯುವಕ ದುರ್ಮರಣ, ಮಹಿಳೆ ಸ್ಥಿತಿ ಗಂಭೀರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SORABA NEWS, 4 NOVEMBER 2024 : ಬೈಕ್‌ ಮತ್ತು ಕಾರಿನ (Car) ಮಧ್ಯೆ ಅಪಘಾತವಾಗಿ ಸವಾರ ಸಾವನ್ನಪ್ಪಿದ್ದು, ಮಹಿಳೆಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಸೊರಬ ತಾಲೂಕು ಚಂದ್ರಗುತ್ತಿ ಸಮೀಪದ ಜೋಳದಗುಡ್ಡೆಯ ವರದಾನದಿ ಸೇತುವೆ ಮೇಲೆ ಘಟನೆ ಸಂಭವಿಸಿದೆ.

ಹೊಸನಗರ ತಾಲೂಕು ಕಾರಕ್ಕಿಯ ಸುದರ್ಶನ್‌ (22) ಮೃತಪಟ್ಟಿದ್ದಾನೆ. ಬೈಕ್‌ನಲ್ಲಿದ್ದ ಬೆಳ್ಳಮ್ಮ ಪುಟ್ಟಪ್ಪ ಚಿಟ್ಟಕ್ಕಿ (65) ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಿಗೆ ಸೊರಬದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ACCIDENT-NEWS-GENERAL-IMAGE.

ಬೈಕ್‌ ಹೊಸನಗರದಿಂದ ಸೊರಬ ಮಾರ್ಗವಾಗಿ ಭದ್ರಾಪುರ ಗ್ರಾಮಕ್ಕೆ ತೆರಳುತ್ತಿತ್ತು. ಚಂದ್ರಗುತ್ತಿ ಕಡೆಯಿಂದ ಆಗಮಿಸಿದ ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ತೀವ್ರ ರಕ್ತಸ್ರಾವವಾಗಿ ಸುದರ್ಶನ್‌ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ‘ಸಾಧು, ಸಂತರ ನೇತೃತ್ವದಲ್ಲಿ ರಕ್ತ ಕ್ರಾಂತಿ’, ಸರ್ಕಾರಕ್ಕೆ ಈಶ್ವರಪ್ಪ ವಾರ್ನಿಂಗ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 4, 2024

Leave a Comment