ಭದ್ರಾವತಿಯಲ್ಲಿ ಕರಡಿ ದಾಳಿ, ವ್ಯಕ್ತಿಗೆ ಗಂಭೀರ ಗಾಯ

BHADRAVATHI NEWS, 9 NOVEMBER 2024 : ಭದ್ರಾವತಿ ತಾಲೂಕಿನ ಅಂತರಗಂಗೆ ಕೆ.ಎಚ್.ನಗರದ ನಿವಾಸಿ ದೇವೇಂದ್ರಪ್ಪ ಎಂಬುವವರ ಮೇಲೆ ಶುಕ್ರವಾರ ಕರಡಿ (Bear) ದಾಳಿ ನಡೆಸಿದೆ. ತೀವ್ರ ಗಾಯಗೊಂಡ ಇವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ದೇವೇಂದ್ರಪ್ಪ ಟೈಲರ್ ವೃತ್ತಿ ಮಾಡುತ್ತಿದ್ದು, ಶುಕ್ರವಾರ ಬಿಸಿಲುಮನೆ ಗ್ರಾಮದಲ್ಲಿರುವ ನಿವೇಶನ ನೋಡಿಕೊಂಡು ಮನೆಗೆ ಹಿಂದಿರುಗುವ ವೇಳೆ ದಾರಿಯಲ್ಲಿ ಎದುರಾದ ಕರಡಿ ದಾಳಿ ನಡೆಸಿದೆ. ದಾಳಿಯಿಂದ ತಪ್ಪಿಸಿಕೊಂಡು ಬಂದ ದೇವೇಂದ್ರಪ್ಪ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

bear-file-photo.

ಇದನ್ನೂ ಓದಿ » ಕಾರು, ಬೈಕ್‌ ಡಿಕ್ಕಿ, ಯುವಕ ದುರ್ಮರಣ, ಮಹಿಳೆ ಸ್ಥಿತಿ ಗಂಭೀರ

Leave a Comment