ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 30 ಜುಲೈ 2019
ಹೊಸನಗರದಲ್ಲಿ ಇವತ್ತು ಆಪರೇಷನ್ ಮುಸ್ಕಾನ್ ನಡೆಸಲಾಗಿದೆ. ಅಂಗಡಿ, ಗ್ಯಾರೇಜ್, ಹೊಟೇಲ್, ಬೇಕರಿ ಸೇರಿದಂತೆ ವಿವಿಧೆಡೆ ಕಾರ್ಮಿಕ ಇಲಾಖೆ, ಪೊಲೀಸರು, ಮಕ್ಕಳ ಸಹಾಯವಾಣಿ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ನೇತೃತ್ವದಲ್ಲಿ ಭರ್ಜರಿ ತಪಾಸಣೆ ನಡೆಸಲಾಗಿದೆ.
14 ವರ್ಷದೊಳಗಿನ ಬಾಲ ಕಾರ್ಮಿಕರು, 18 ವರ್ಷದೊಳಗಿನ ಕಿಶೋರ ಕಾರ್ಮಿಕರನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳಲಾಗಿದೆಯೆ ಎಂಬುದನ್ನು ಪರಿಶೀಲಿಸಲಾಯಿತು. ಹೊಸನಗರದ ವಿವಿಧೆಡೆ ದಾಳಿ ನಡೆಸಿದ ಅಧಿಕಾರಿಗಳು ತಪಾಸಣೆ ನಡೆಸಿ, ಬಾಲ ಕಾರ್ಮಿಕ ಪದ್ಧತಿ ವಿರುದ್ಧ ವ್ಯಾಪಾರಿಗಳಲ್ಲಿ ಜಾಗೃತಿ ಮೂಡಿಸಲಾಯಿತು.
ಬಾಲ ಕಾರ್ಮಿಕರನ್ನು ನೇಮಿಸಿಕೊಂಡರೆ 20 ಸಾವಿರಿಂದ 50 ಸಾವಿರ ರೂಪಾಯಿವರೆಗೆ ದಂಡ ವಿಧಿಸಬಹುದಾಗಿದೆ ಎಂದು ಮನವರಿಕೆ ಮಾಡಿಕೊಟ್ಟರು. ಇವತ್ತಿನ ಕಾರ್ಯಾಚರಣೆಯಲ್ಲಿ ಯಾವುದೇ ವ್ಯಾಪಾರಿಗಳು ಬಾಲ ಕಾರ್ಮಿಕರನ್ನು ನೇಮಿಸಿಕೊಂಡಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದರು.
ಹೊಸನಗರದ ಕಾರ್ಮಿಕ ನಿರೀಕ್ಷಕ ಬಿ.ಶಿವಕುಮಾರ್, ಸರ್ಕಲ್ ಇನ್ಸ್’ಪೆಕ್ಟರ್ ಗುರಣ್ಣ ಎಸ್.ಹೆಬ್ಬಾರ್, ರಘುನಾಥ್, ಜಿಲ್ಲಾ ಮಕ್ಕಳ ಸಹಾಯವಾಣಿ ಸಿಬ್ಬಂದಿ ಶಾಂತಾ, ಅಶೋಕ್ ಮತ್ತಿತರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





