ಶಿವಮೊಗ್ಗದಲ್ಲಿ ದಿಢೀರ್‌ ಕಾರ್ಯಾಚರಣೆ, 20 ಆಟೋಗಳು ಸೀಜ್‌, 100 ಕೇಸ್‌

SHIMOGA NEWS, 10 NOVEMBER 2024 : ಕಡ್ಡಾಯವಿದ್ದರು ಮೀಟರ್‌ ಬಳಸದ ಆಟೋ (Auto) ಚಾಲಕರಿಗೆ ಸಂಚಾರ ಠಾಣೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ ದಿಢೀರ್‌ ಕಾರ್ಯಾಚರಣೆ ನಡೆಸಿದ ಪೊಲೀಸರು ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ ಅಟೋಗಳನ್ನು ವಶಕ್ಕೆ ಪಡೆದಿದ್ದಾರೆ.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

20 ಆಟೋ ವಶಕ್ಕೆ, 100 ಕೇಸ್‌

ಮೀಟರ್ ಬಳಕೆ ಮಾಡದ 20 ಆಟೊಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿಯಮ ಉಲ್ಲಂಘಿಸಿದ ಆಟೊ ಚಾಲಕರ ವಿರುದ್ಧ ಐಎಂವಿ ಕಾಯಿದೆ ಅಡಿ 100 ಪ್ರಕರಣಗಳನ್ನು ದಾಖಲಿಸಿದ್ದಾರೆ.

Traffic-Police-check-auto-for-meter

ಆಟೋ ಮೀಟರ್ ಬಳಸದೇ ಇರುವುದು, ಹೆಚ್ಚಿನ ದರ ಕೇಳುತ್ತಿರುವ ಬಗ್ಗೆ ಬಂದ ಮಾಹಿತಿ ಆಧಾರದ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾರ್ಗದರ್ಶನದಲ್ಲಿ ಪೂರ್ವ ಮತ್ತು ಪಶ್ಚಿಮ ಸಂಚಾರ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಸಾರ್ವಜನಿಕರು ಪ್ರಯಾಣಿಸುವ ಸಮಯದಲ್ಲಿ ಆಟೊಗಳಲ್ಲಿ ಮೀಟರ್ ಬಳಕೆ ಮಾಡುತ್ತಿರುವ ಬಗ್ಗೆ ತಪಾಸಣೆ ನಡೆಸಲಾಗಿದೆ. ಈ ವೇಳೆ ನಿಯಮ ಉಲ್ಲಂಘನೆ ಮಾಡಿದವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

Auto Meter checking

ಇದನ್ನೂ ಓದಿ » ಶಾಲೆ ಮುಗಿಸಿ ಮನೆಗೆ ಬಂದು ನೇಣಿಗೆ ಕೊರಳೊಡ್ಡಿದ ಬಾಲಕಿ

Leave a Comment