ಲಾರಿ, ಬಸ್‌ ಡಿಕ್ಕಿ, ರಸ್ತೆ ಬದಿಗೆ ಪಲ್ಟಿಯಾದ ಖಾಸಗಿ ಬಸ್

HOSANAGARA NEWS, 12 NOVEMBER 2024 : ಲಾರಿ ಮತ್ತು ಬಸ್‌ (Bus) ಮಧ್ಯೆ ಅಪಾಘವಾಗಿದ್ದು, ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ ರಸ್ತೆ ಬದಿಗೆ ಪಲ್ಟಿಯಾಗಿದೆ. ಹಲವು ಪ್ರಯಾಣಿಕರು ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಹೊಸನಗರ ತಾಲೂಕು ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿಯಲ್ಲಿ ಘಟನೆ ಸಂಭವಿಸಿದೆ. ಖಾಸಗಿ ಬಸ್‌ ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತ್ತಿತ್ತು. ಲಾರಿ ಹೊಸನಗರದಿಂದ ಹೋಗುತ್ತಿತ್ತು. ಬಸ್‌ ಮತ್ತು ಲಾರಿ ಮಧ್ಯೆ ಡಿಕ್ಕಿಯಾಗಿದೆ. ಈ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ ಪಲ್ಟಿಯಾಗಿದೆ.

Private-bus-incident-at-chikkajeni-near-ripponpete.

ಬಸ್ಸಿನಲ್ಲಿ ಸುಮಾರು 20 ಪ್ರಯಾಣಿಕರಿದ್ದರು ಎನ್ನಲಾಗಿದೆ. ಈ ಪೈಕಿ ಹಲವರು ಗಾಯಗೊಂಡಿದ್ದಾರೆ. ಕೂಡಲೆ ಅವರಿಗೆ ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ರಿಪ್ಪನ್‌ಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲು ನೆರವಾದರು.‌

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : November 12, 2024 at 4:20 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ನವೆಂಬರ್ 12, 2024

Leave a Comment