ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 12 NOVEMBER 2024 : ಕಾರು, ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ (Nurse) ಚಿಕಿತ್ಸೆ ಫಲಕಾರಿಯಾಗದೆ ಕಳೆದ ರಾತ್ರಿ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಆಕೆಯ ಪುತ್ರನಿಗೆ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ವಿನೋಬನಗರ ನಿವಾಸಿ ಉಮಾ (44) ಮೃತ ಮಹಿಳೆ. ಅವರ ಪುತ್ರ ಶ್ರೇಯಸ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆ ಸಂಭವಿಸಿದ್ದು ಹೇಗೆ?
ಉಮಾ ಅವರು ಕ್ಲಿನಿಕ್ ಒಂದರಲ್ಲಿ ನರ್ಸ್ ವೃತ್ತಿ ಮಾಡುತ್ತಿದ್ದರು. ನ.9ರ ರಾತ್ರಿ ಕಲ್ಲಹಳ್ಳಿಯಲ್ಲಿ ರೋಗಿಯೊಬ್ಬರಿಗೆ ಇಂಜೆಕ್ಷನ್ ಕೊಡುವ ಸಲುವಾಗಿ ಪುತ್ರ ಶ್ರೇಯಸ್ ಜೊತೆಗೆ ತೆರಳಿದ್ದರು. ಕೆಲಸ ಮುಗಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ಹಿಂತಿರುಗುವಾಗ ಸವಿ ಬೇಕರಿ ಬಳಿ ಅಪಘಾತ ಸಂಭವಿಸಿತ್ತು. ಬೈಕ್ ಯು ಟರ್ನ್ ತೆಗೆದುಕೊಳ್ಳುತ್ತಿದ್ದಾಗ ಪೊಲೀಸ್ ಚೌಕಿ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ವೈರಲ್ ಆದ ವಿಡಿಯೋಗಳು
ಇನ್ನು, ಅಪಘಾತದ ಸ್ಥಳದ್ದು ಎನ್ನಲಾದ ವಿಡಿಯೋಗಳು ವೈರಲ್ ಆಗಿವೆ. ಅಪಘಾತಪಡಿಸಿದ ಕಾರು ಚಾಲಕನಿಗೆ ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಕೊನೆಗೆ ಕಾರು ಚಾಲಕ ಮತ್ತು ಸ್ಥಳೀಯರು ಗಾಯಾಳು ಉಮಾ ಅವರನ್ನು ಮ್ಯಾಕ್ಸ್ ಆಸ್ಪತ್ರೆಗೆ ಮತ್ತು ಶ್ರೇಯಸ್ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರ ಪೂರ್ವಪರ ವಿಚಾರಿಸಿ ಸಂಬಂಧಿಕರಿಗೆ ವಿಷಯ ತಲುಪಿಸಿದ್ದರು.
ಚಿಕಿತ್ಸೆಗೆ ಸ್ಪಂದಿಸದೆ ಉಮಾ ಕೊನೆಯುಸಿರು
ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ್ದ ಉಮಾ ಅವರ ಸಹೋದರ ಹೆಚ್ಚಿನ ಚಿಕಿತ್ಸೆಗಾಗಿ ಶ್ರೇಯಸ್‌ನನ್ನು ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಇತ್ತ ಗಂಭೀರವಾಗಿ ಗಾಯಗೊಂಡಿದ್ದ ಉಮಾ ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಕೊನೆಯುಸಿರೆಳೆದಿದ್ದಾರೆ.
ಘಟನೆ ಸಂಬಂಧ ಪಶ್ಚಿಮ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
ಇದನ್ನೂ ಓದಿ » ಲಾರಿ, ಬಸ್ ಡಿಕ್ಕಿ, ರಸ್ತೆ ಬದಿಗೆ ಪಲ್ಟಿಯಾದ ಖಾಸಗಿ ಬಸ್
LATEST NEWS
- ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

- ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್ ಲಾರಿ, ಇಲ್ಲಿದೆ ಡಿಟೇಲ್ಸ್

- ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

- ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್ ವಾಪಸ್

About The Editor
ನಿತಿನ್ ಆರ್.ಕೈದೊಟ್ಲು





